ಕಾರವಾರ; ಭಾರೀ ಮಳೆಯಿಂದಾಗಿ ಏಕಾಏಕಿ ಕಾಳಿ ಸೇತುವೆ ಕುಸಿದ ಪರಿಣಾಮ ಲಾರಿಯೊಂದು ನದಿಗೆ ಬಿದ್ದ ಘಟನೆ ಕಾರವಾರ ನಗರ ವ್ಯಾಪ್ತಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಕಾಳಿ ನದಿ ಸೇತುವೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಏಕಾಏಕಿ ಕಾಳಿ ಸೇತುವೆ ಕುಸಿದ ಪರಿಣಾಮ ಸೇತುವೆ ಗೋವಾದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ತಮಿಳುನಾಡು ಮೂಲದ ಲಾರಿಯೊಂದು ನದಿಗೆ ಬಿದ್ದಿದೆ. ಚಾಲಕ, ಲಾರಿಯ ಕ್ಯಾಬಿನ್ ಏರಿ ನಿಂತು ತನ್ನ ರಕ್ಷಣೆಗಾಗಿ ಜೋರಾಗಿ ಕೂಗಿಕೊಂಡಿದ್ದಾನೆ. ಅದನ್ನು ಕೇಳಿದ ಸ್ಥಳೀಯ ಮೀನುಗಾರರು ಕರಾವಳಿ ಕಾವಲು ಪಡೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ತಕ್ಷಣ ಸ್ಥಳಕ್ಕೆ ಆಗಮಿಸಿದ ಕರಾವಳಿ ಕಾವಲುಪಡೆ ಸಿಬ್ಬಂದಿಸ್ಥಳೀಯ ಮೀನುಗಾರರ ಸಹಾಯದೊಂದಿಗೆ ಲಾರಿಯಲ್ಲಿದ್ದ ಚಾಲಕನನ್ನು ರಕ್ಷಣೆ ಮಾಡಿದ್ದಾರೆ.
ಕಾಳಿ ನದಿಯ ಹಳೆ ಸೇತುವೆ ಇದಾಗಿದ್ದು ಸುಮಾರು ಮೂರು ಕಡೆ ಕುಸಿದಿದೆ. ಸದ್ಯ ಗೋವಾ -ಕಾರವಾರ ಮಾರ್ಗದ ಎರಡು ಭಾಗದ ಸಂಚಾರ ವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಸ್ಥಳೀಯ ಶಾಸಕ ಸತೀಶ್ ಸೈಲ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ನಂತರ ಆಸ್ಪತ್ರೆಗೆ ತೆರಳಿ ಗಾಯಾಳು ಚಾಲಕನ ಆರೋಗ್ಯ ವಿಚಾರಿಸಿ ಘಟನೆ ಕುರಿತಂತೆ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಪಡೆದಿದ್ದಾರೆ.