Thursday, July 16, 2026
Homeಅಪರಾಧವಿಷ್ಣುಮೂರ್ತಿ ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆ..!

ವಿಷ್ಣುಮೂರ್ತಿ ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆ..!

- Advertisement -
- Advertisement -

ಉಡುಪಿ: ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ವಿಷ್ಣಮೂರ್ತಿ ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆಯಾಗಿದೆ.

ಮೃತ ಯುವಕ ಪಡುಬಿದ್ರಿ ನಿವಾಸಿ ವಿನಯ್ ರಾವ್(26).

ವಿನಯ್ ರಾವ್ ಗುರುವಾರ ರಾತ್ರಿ 12 ಗಂಟೆ ವೇಳೆಗೆ ದೇವಸ್ಥಾನದ ಬಳಿ ತಿರುಗಾಡುತ್ತಿರುವ ದೃಶ್ಯವು ಸಿಸಿ ಕ್ಯಾಮರದಲ್ಲಿ ಪತ್ತೆಯಾಗಿದ್ದು, ಈತ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಾಪು ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪ್ರಕರಣದ ಕುರಿತು ಪರಿಶೀಲನೆ ನಡೆಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಡುಪಿಗೆ ಕೊಂಡೊಯ್ದಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ, ತನಿಖೆ ನಡೆಯುತ್ತಿದೆ.

- Advertisement -

Latest News

error: Content is protected !!