Tuesday, August 11, 2026
Homeಕರಾವಳಿಮಂಗಳೂರುಕಲ್ಲಡ್ಕ: ವಾಹನ ಜಾಥಾ ಕಾರ್ಯಕ್ರಮಕ್ಕೆ ಇಲ್ಲ ಪೊಲೀಸ್ ಅನುಮತಿ; ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಕಲ್ಲಡ್ಕ: ವಾಹನ ಜಾಥಾ ಕಾರ್ಯಕ್ರಮಕ್ಕೆ ಇಲ್ಲ ಪೊಲೀಸ್ ಅನುಮತಿ; ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ

- Advertisement -
- Advertisement -

ಕಲ್ಲಡ್ಕ: ಆಗಸ್ಟ್ 13 ರಂದು ಕಲ್ಲಡ್ಕದಲ್ಲಿ ವಾಹನ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಪ್ರಸಾರವಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಪೂರ್ವಾನುಮತಿ ಇಲ್ಲದೆ ವಾಹನ ಜಾಥಾ ಅಥವಾ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ಸಾರ್ವಜನಿಕರು ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೊದಲು, ಆ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ಇಲಾಖೆಗಳಿಂದ ಅಧಿಕೃತ ಪೂರ್ವಾನುಮತಿ ಪಡೆಯಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಂಡು ಪಾಲ್ಗೊಳ್ಳಬೇಕಾಗಿ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಲಾಗಿದೆ.

- Advertisement -

Latest News

error: Content is protected !!