Sunday, June 7, 2026
Homeಕರಾವಳಿಬಂಟ್ವಾಳ: ಕಲ್ಲಡ್ಕ ಪ್ರಭಾಕರ್ ಭಟ್ ಭಾಷಣ, ರಾಷ್ಟ್ರಧ್ವಜಕ್ಕೆ ಅವಮಾನ: ದೂರು ದಾಖಲು

ಬಂಟ್ವಾಳ: ಕಲ್ಲಡ್ಕ ಪ್ರಭಾಕರ್ ಭಟ್ ಭಾಷಣ, ರಾಷ್ಟ್ರಧ್ವಜಕ್ಕೆ ಅವಮಾನ: ದೂರು ದಾಖಲು

- Advertisement -
- Advertisement -

ಬಂಟ್ವಾಳ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ವಿರುದ್ಧ ಇಲ್ಲಿನ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಲ್ಲಿಗೆ ಗ್ರಾಮದ ದೇವಂದಬೆಟ್ಟು ದೇವಸ್ಥಾನದಲ್ಲಿ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಡಾ.ಭಟ್ ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರ ದೂರಿನಲ್ಲಿ ಆರೋಪಿಸಿದ್ದಾರೆ. ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶದಿಂದ ಕಲ್ಲಡ್ಕ ಅವರು ಈ ಭಾಷಣವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಡಾ ಭಟ್ ಅವರು ರಾಷ್ಟ್ರಧ್ವಜವನ್ನು ಅವಹೇಳನಕಾರಿಯಾಗಿ ಮಾತನಾಡಿದ್ದಲ್ಲದೆ ಕೋಮು ಭಾವನೆಗಳನ್ನು ಪ್ರಚೋದಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಜೋರಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಈ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಮಾಜದಲ್ಲಿ ಶಾಂತಿ ಕದಡುವ ಆತಂಕ ಎದುರಾಗಿದೆ ಎಂದು ಆರೋಪಿಸಿದರು.

- Advertisement -

Latest News

error: Content is protected !!