Wednesday, June 26, 2024
Homeಕರಾವಳಿಉಡುಪಿಕಾರ್ಕಳ :  ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ;ಗ್ರಾಮ ಪಂಚಾಯತ್ ಸದಸ್ಯ ಅರೆಸ್ಟ್

ಕಾರ್ಕಳ :  ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ;ಗ್ರಾಮ ಪಂಚಾಯತ್ ಸದಸ್ಯ ಅರೆಸ್ಟ್

spot_img
- Advertisement -
- Advertisement -

ಕಾರ್ಕಳ :  ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ವಿರುದ್ಧ ಪೋಕ್ಸೋ ಹಾಗೂ ದಲಿತ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮ ಪಂಚಾಯತಿ ಸದಸ್ಯ ಸಂತೋಷ್ ಪುತ್ರನ್ (46) ವಿವಾಹಿತನಾಗಿದ್ದು, ಬಾಲಕಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಪೋಷಕರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ  ಪೊಲೀಸರು ಆರೋಪಿಯನ್ನು  ಬಂಧಿಸಿ ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಆರೋಪಿ ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಇನ್ನು ಆರೋಪಿ ಸಂತೋಷ್ ಪುತ್ರನ್ ಕಲ್ಯಾ ಪಂಚಾಯತ್ ಕರ ವಸೂಲಿಗಾರ ದಿನೇಶ್ ನಾಯ್ಕ್ ಎಂಬವರಿಗೆ ವಿನಾಕಾರಣ ಪದೇಪದೇ ಮಾನಸಿಕ ಕಿರುಕುಳ ನೀಡುತ್ತಿದ್ದ,ಕೆಲಸ ಬಿಡದಿದ್ದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆಯೊಡ್ಡಿದ್ದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದ ದಿನೇಶ್ ನಾಯ್ಕ್ ಜೀವ ಭಯದಿಂದ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದಾಗಿ ದಿನೇಶ್ ನಾಯ್ಕ್ ಮಾಧ್ಯಮಗಳ ಮುಂದೆ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಇನ್ನು ಕಾಮುಕ ಸಂತೋಷ್ ಪುತ್ರನ್ ರವರ ಸದಸ್ಯತ್ವವನ್ನು ತಕ್ಷಣವೇ ರದ್ದುಪಡಿಸಿ ಈತನಿಗೆ ಕಠಿಣ ಶಿಕ್ಷೆ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

- Advertisement -
spot_img

Latest News

error: Content is protected !!