Thursday, June 27, 2024
Homeತಾಜಾ ಸುದ್ದಿಸಾಹಿತಿ ನಾಡೋಜ ಕಮಲ ಹಂಪನಾ ವಿಧಿವಶ

ಸಾಹಿತಿ ನಾಡೋಜ ಕಮಲ ಹಂಪನಾ ವಿಧಿವಶ

spot_img
- Advertisement -
- Advertisement -

ಬೆಂಗಳೂರು:ನಾಡಿನ ಅಗ್ರಗಣ್ಯ ಮಹಿಳಾ ಸಾಹಿತಿಯಾಗಿದ್ದ ನಾಡೋಜ ಕಮಲ ಹಂಪನಾ (89) ಅವರು ಇಂದು ರಾಜಾಜಿನಗರದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರು ಮಲಗಿದ್ದಲ್ಲಿಯೇ ಚಿರನಿದ್ರೆಗೆ ಜಾರಿದ್ದಾರೆ.

ಕಮಲಾ ಹಂಪನಾ ಅವರು ಪತಿ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ, ಪುತ್ರಿ ದೂರದರ್ಶನ ನಿರ್ದೇಶಕರಾದ ಎಚ್.ಎನ್.ಆರತಿ, ಬಂಧುಮಿತ್ರರು, ಸೇರಿದಂತೆ ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ.

ಸಂಜೆಯ ತನಕ ಕಮಲಾ ಹಂಪನಾ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು,ಬಳಿಕ ಅವರ ಇಚ್ಛೆಯಂತೆ ರಾಮಯ್ಯ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಜಡಲಾಗುತ್ತದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ

ಇನ್ನು ಕಮಲಾ ಹಂಪನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು  ಹಿರಿಯ ಸಾಹಿತಿ ಡಾ.ಕಮಲ ಹಂಪನಾ ಅವರ ಅನಿರೀಕ್ಷಿತ ಸಾವಿನಿಂದ ದು:ಖಿತನಾಗಿದ್ದೇನೆ.ಸಾಹಿತ್ಯ ಕೃಷಿಯ ಜೊತೆ ಸಂಶೋಧನೆ ಮತ್ತು ಬೋಧನೆಗಳಿಂದಲೂ ಜನಪ್ರಿಯರಾಗಿದ್ದ ಡಾ.ಕಮಲಾ ಅವರದ್ದು ಸರ್ವರಿಗೂ ಒಳಿತನ್ನು ಬಯಸಿದ ಜೀವ. ಡಾ.ಹಂಪ ನಾಗರಾಜಯ್ಯ ಮತ್ತವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ ಎಂದಿದ್ದಾರೆ.

- Advertisement -
spot_img

Latest News

error: Content is protected !!