Saturday, May 4, 2024
Homeತಾಜಾ ಸುದ್ದಿಕಮಲಿ ಧಾರಾವಾಹಿ ನಿರ್ದೇಶಕ ಅರವಿಂದ್ ಕೌಶಿಕ್ ಬಂಧನ

ಕಮಲಿ ಧಾರಾವಾಹಿ ನಿರ್ದೇಶಕ ಅರವಿಂದ್ ಕೌಶಿಕ್ ಬಂಧನ

spot_img
- Advertisement -
- Advertisement -

ಬೆಂಗಳೂರು: ಧಾರಾವಾಹಿ ನಿರ್ಮಾಪಕನಿಂದ ಹಣಪಡೆದು ವಂಚಿಸಿದ್ದಾರೆ ಎಂಬ ಆರೋಪದಡಿ ಕನ್ನಡದ ಖ್ಯಾತ ನಿರ್ದೇಶಕ ಅರವಿಂದ್​ ಕೌಶಿಕ್​ರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಅರವಿಂದ್​ ಕೌಶಿಕ್​ ಅವರು ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಹೆಸರು ಮಾಡಿದ್ದಾರೆ. ನಮ್ ಏರಿಯಾದಲ್ಲಿ ಒಂದಿನ,‌ ಹುಲಿರಾಯ ಹಾಗೂ ಶಾರ್ದೂಲ ಹೆಸರಿನಿ ಸಿನಿಮಾಗಳನ್ನು ಕೌಶಿಕ್​ ನಿರ್ದೇಶನ ಮಾಡಿದ್ದಾರೆ. ಕನ್ನಡ ಕಿರುತೆರೆಯಲ್ಲಿ ಮೂಡಿಬಂದ ಕಮಲಿ ಧಾರವಾಹಿಯನ್ನು ಕೂಡ ನಿರ್ದೇಶನ ಮಾಡಿದ್ದಾರೆ.

, ಕಮಲಿ ಧಾರವಾಹಿ ನಿರ್ಮಾಣ ಮಾಡಲಿಕ್ಕೆ ನಿರ್ಮಾಪಕ ರೋಹಿತ್​ 73 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದರಂತೆ. 2018 ರಲ್ಲಿ ಕಮಲಿ ಸೀರಿಯಲ್ ನಿರ್ಮಾಣಕ್ಕೆ ರೋಹಿತ್​ ಹಣ ಹೂಡಿಕೆ ಮಾಡಿದ್ದರಂತೆ. ಆದರೆ, ಧಾರವಾಹಿ ತೆರೆಕಂಡ ನಂತರ ಹಣ ಹಿಂತಿರುಗಿಸದೇ, ಲಾಭಾಂಶವನ್ನೂ ನೀಡದೇ ವಂಚನೆ ಮಾಡಿದ್ದಾರೆ ಎಂದು ಕೌಶಿಕ್​ ವಿರುದ್ಧ ರೋಹಿತ್​ ಆರೋಪ ಮಾಡಿದ್ದಾರೆ.

ಈ ಸಂಬಂಧ ನಿರ್ಮಾಪಕ ರೋಹಿತ್ ವೈಯ್ಯಾಲಿಕಾವಲ್ ಠಾಣೆಗೆ ದೂರು ನೀಡಿದ್ದಾರೆ. ಅರವಿಂದ್ ಕೌಶಿಕ್ ವಿರುದ್ಧ 420 ಸೆಕ್ಷನ್​ ಅಡಿ ಪ್ರಕರಣ ದಾಖಲಾಗಿದ್ದು, ಸದ್ಯ ವೈಯ್ಯಾಲಿಕಾವಲ್ ಪೊಲೀಸರು ಅರವಿಂದ್ ಕೌಶಿಕ್​ರನ್ನು ಬಂಧಿಸಿದ್ದಾರೆ. 

- Advertisement -
spot_img

Latest News

error: Content is protected !!