Sunday, June 7, 2026
HomeUncategorizedಕಂಬಳದ ಉಸೇನ್ ಬೋಲ್ಟ್ ಶ್ರೀನಿವಾಸ ಗೌಡರಿಗೆ ಜೀವ ಬೆದರಿಕೆ!!

ಕಂಬಳದ ಉಸೇನ್ ಬೋಲ್ಟ್ ಶ್ರೀನಿವಾಸ ಗೌಡರಿಗೆ ಜೀವ ಬೆದರಿಕೆ!!

- Advertisement -
- Advertisement -

ಮೂಡಬಿದಿರೆ : ಕಂಬಳದಲ್ಲಿ ದಾಖಲೆಗಳನ್ನು ನಿರ್ಮಿಸಿ, ಕಂಬಳದ ಉಸೇನ್ ಬೋಲ್ಟ್ ಎಂದೇ ಪ್ರಸಿದ್ಧಿಯಾದ ಶ್ರೀನಿವಾಸ ಗೌಡ ಅವರಿಗೆ ವ್ಯಕ್ತಿಯೊಬ್ಬರು ಪೋನ್ ಮೂಲಕ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು, ಬೆದರಿಕೆ ಸಂಭಾಷಣೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗುರುವಾರ ಪ್ರಶಾಂತ್ ಎಂಬ ವ್ಯಕ್ತಿ ದೂರವಾಣಿಯಲ್ಲಿ ಕಂಬಳದ ಕುರಿತು ಮಾತನಾಡಿ, ತನ್ನನ್ನು, ತನ್ನ ಕುಟುಂಬದವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಶ್ರೀನಿವಾಸ ಗೌಡ ಅವರು ಮೂಡುಬಿದಿರೆ ಠಾಣೆಗೆ ದೂರು ನೀಡಿದ್ದಾರೆ.

ಬೆದರಿಕೆ ಒಡ್ಡಿದ ವ್ಯಕ್ತಿ ಕರೆಯಲ್ಲಿ, ‘ನಾನು ಪ್ರಶಾಂತ್ ಬಂಗೇರ, ಶ್ರೀರಾಮ ಸೇನೆಯಲ್ಲಿದ್ದೇನೆ ಎಂದು ಪರಿಚಯಿಸಿಕೊಂಡು ಮಂಗಳೂರು ಕಾರ್ ಸ್ಟ್ರೀಟ್‌ನಲ್ಲಿ ರಿಯಲ್ ಎಸ್ಟೇಟ್ ಕಚೇರಿ ಇದೆ ಅಲ್ಲಿಗೆ ಬನ್ನಿ ಕಂಬಳದ ಇತಿಹಾಸ ತಿಳಿಸುತ್ತೇನೆ’ ಎಂದು ಆಹ್ವಾನಿಸಿದ್ದಾರೆ. ‘ನಾನು ಬರುವುದಿಲ್ಲ, ನೀವು ಒಂಟಿಕಟ್ಟೆಗೆ ಬನ್ನಿ’ ಎಂದು ಶ್ರೀನಿವಾಸ ಗೌಡ ಹೇಳಿದ್ದಾರೆ. ‘ನಾನು ಬರುತ್ತೇನೆ. ಆದರೆ. ನೀನು ಅಲ್ಲಿಗೆ ಬರುವಾಗ ಬೆನ್ನಿಗೆ ಹಾಳೆ ಕಟ್ಟಿಕೊಂಡು ಬಾ.ಜತೆಯಲ್ಲಿ ನಿನ್ನ ಬೆಂಬಲಿಗರನ್ನು ಕರೆದುಕೊಂಡು ಬಾ’ ಎಂದು ಪ್ರಶಾಂತ್ ಗದರಿಸಿದ್ದಾರೆ.

ಆರೋಪಿಯನ್ನು ಶುಕ್ರವಾರ ಸಂಜೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಶ್ರೀನಿವಾಸ ಗೌಡ ಅಭಿಮಾನಿ ಬಳಗ ಇದೇ 17 ಮಧ್ಯಾಹ್ನ 3 ಗಂಟೆಗೆ ಸಮಾಜ ಮಂದಿರದಲ್ಲಿ ಸಭೆ ಕರೆದಿದ್ದು, ಕಂಬಳ ಯಜಮಾನರು, ಓಟಗಾರರು, ಕಂಬಳಾಭಿಮಾನಿಗಳನ್ನು ಆಹ್ವಾನಿಸಿದೆ.

ಘಟನೆಯನ್ನು ಖಂಡಿಸಿದ ಶಾಸಕ ಉಮಾನಾಥ ಕೋಟ್ಯಾನ್, ಇದು ತುಳುನಾಡಿಗೆ ಆಗಿರುವ ಅವಮಾನ, ಆರೋಪಿ ಪ್ರಶಾಂತ್ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಪೊಲೀಸರಿಗೆ ಸೂಚಿಸುವುದಾಗಿ ತಿಳಿಸಿದ್ದಾರೆ. ಮಾಜಿ ಸಚಿವ ಅಭಯಚಂದ್ರ ಜೈನ್ ಕೂಡ ಘಟನೆಯನ್ನು ಖಂಡಿಸಿದ್ದಾರೆ.

- Advertisement -

Latest News

error: Content is protected !!