ಮೂಡುಬಿದಿರೆ: ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಜಂಟಿಯಾಗಿ ಕಂಬಳ ಓಟಗಾರರಿಗಾಗಿ 10 ದಿನಗಳ ತರಬೇತಿ ಶಿಬಿರವನ್ನು ಆಯೋಜಿಸಿವೆ.
ಈ ಶಿಬಿರಕ್ಕೆ ಓಟಗಾರರನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಸೆಪ್ಟೆಂಬರ್ 6 ರಂದು ಬೆಳಿಗ್ಗೆ 9:30 ಕ್ಕೆ ಕಾರ್ಕಳದ ಮಿಯಾರಿನಲ್ಲಿ ನಡೆಯಲಿದೆ. ಭಾಗವಹಿಸಲು ಇಚ್ಛಿಸುವ ಆಸಕ್ತ ಯುವಕರು ಮತ್ತು ಓಟಗಾರರು ಬೆಳಿಗ್ಗೆ 9:00 ರಿಂದ 10:00 ಗಂಟೆಯ ಒಳಗೆ ಸ್ಥಳದಲ್ಲಿ ಉಪಸ್ಥಿತರಿದ್ದು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಈ ಆಯ್ಕೆ ಪ್ರಕ್ರಿಯೆಯಲ್ಲಿ ಅರ್ಹತೆ ಪಡೆಯುವ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 16 ರಿಂದ 26 ರವರೆಗೆ 10 ದಿನಗಳ ಕಾಲ ವಿಶೇಷ ತರಬೇತಿ ನೀಡಲಾಗುತ್ತದೆ. ರಾಜ್ಯ ಕಂಬಳ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಕಂಗಿನಮನೆ ಹಾಗೂ ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ವಿದ್ಯಾಧರ್ ಜೈನ್ ಅವರು ಈ ಕುರಿತು ಜಂಟಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಹೆಚ್ಚಿನ ವಿವರಗಳು ಮತ್ತು ಮಾಹಿತಿಗಾಗಿ ಆಸಕ್ತರು ವಿಜಯ್ ಕುಮಾರ್ (9945912877), ವಿದ್ಯಾಧರ ಜೈನ್ (9945791440) ಅಥವಾ ಅಜಿತ್ ಕುಮಾರ್ (9900701359) ಅವರನ್ನು ನೇರವಾಗಿ ಸಂಪರ್ಕಿಸಬಹುದು.


