- Advertisement -
![]()
- Advertisement -
ಬಂಟ್ವಾಳ:ಕನಕದಾಸರ ದಿನಚರಣೆಯ ಪ್ರಯುಕ್ತ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಕನಕ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.
ಬೂಡ ಅಧ್ಯಕ್ಷ ಬೇಬಿ ಕುಂದರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಯಾವುದೇ ಜಯಂತಿ, ಆಚರಣೆಗಳು ನಾಲ್ಕು ಗೋಡೆಗಳ ಮಧ್ಯೆ ನಡೆಯದೆ ಯುವ ಸಮುದಾಯಕ್ಕೆ ದಾರ್ಶನಿಕ ಪುರುಷರ ಜೀವನ ಚರಿತ್ರೆಯ ದರ್ಶನವಾಗುವ ನಿಟ್ಟಿನಲ್ಲಿ ಸಾರ್ವಜನಿಕವಾಗಿ ಕಾರ್ಯಕ್ರಮಗಳು ನಡೆಯಬೇಕು ಎಂದು ತಿಳಿಸಿದರು.
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಉಪಸ್ಥಿತರಿದ್ದರು. ಉಪ ತಹಶಿಲ್ದಾರ್ ನವೀನ್ ಬೆಂಜನಪದವು ಕನಕ ಜಯಂತಿ ಆಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಸ್ವಾಗತಿಸಿ ವಂದಿಸಿದರು.
- Advertisement -


