Saturday, June 6, 2026
Homeತಾಜಾ ಸುದ್ದಿಕನ್ನಡ ಚಲನಚಿತ್ರ ರಂಗದ ಹಿರಿಯ ನಟ ಬೂದಾಳ್ ಕೃಷ್ಣಮೂರ್ತಿ ಇನ್ನು ನೆನಪು ಮಾತ್ರ!..

ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ಬೂದಾಳ್ ಕೃಷ್ಣಮೂರ್ತಿ ಇನ್ನು ನೆನಪು ಮಾತ್ರ!..

- Advertisement -
- Advertisement -

ಬೆಂಗಳೂರು: ಹಿರಿಯ ಕನ್ನಡ ಚಲನಚಿತ್ರ ನಿರ್ದೇಶಕ, ನಟ ಬೂದಾಳ್ ಕೃಷ್ಣಮೂರ್ತಿ(71) ಅವರು ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ಕೆಂಗೇರಿ ಶಿರ್ಕಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಅವರು 1973ರಲ್ಲಿ ಸಿದ್ಧಲಿಂಗಯ್ಯನವರ ಬೂತಯ್ಯನ ಮಗ ಅಯ್ಯು ಚಲನಚಿತ್ರದ ಸಹಾಯಕ ನಿರ್ದೇಶಕರಾಗುವ ಮೂಲಕ ಚಿತ್ರಂಗ ಪ್ರವೇಶಿಸಿದ್ದರು.

ಇವರು ಅಭಿನಯಿಸಿದ ಶ್ರೀಗಂಧ, ಅರಿಶಿನ ಕುಂಕುಮ, ಬಲ್ ನನ್ಮಗ, ಪ್ರಜಾಶಕ್ತಿ, ನಿರ್ಣಯ, ಆರ್ಯಭಟ ಮುಂತಾದ ಚಿತ್ರಗಳು ಅದ್ಭುತವಾಗಿದ್ದವು.ಅವರ ನಟನೆಯ ಚಿತ್ರಗಳಾದ ಎರಡು ದಂಡೆಯ ಮೇಲೆ, ಒಲವಿನ ಕಾಣಿಕೆ, ಸೀತಾಂಜನೇಯ, ಶುಭಲಗ್ನ, ಲಂಚ ಸಾಮ್ರಾಜ್ಯ ಮುಂತಾದ ಚಿತ್ರಗಳು ಕನ್ನಡಿಗರ ಮನದಲ್ಲಿ ಅಚ್ಚಳಿಯದೆ ಉಳಿದಿವೆ.

ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಸ್ಯಾಂಡಲ್ ವುಡ್ ನಟ, ನಿರ್ದೇಶಕ ಬೂದಾಳ್ ಕೃಷ್ಣಮೂರ್ತಿಯವರು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

- Advertisement -

Latest News

error: Content is protected !!