Friday, June 5, 2026
Homeಕರಾವಳಿಡಾ. ಮೋಹನ್ ಆಳ್ವ ಅವರಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ವಾರ್ಷಿಕ ಪ್ರಶಸ್ತಿ

ಡಾ. ಮೋಹನ್ ಆಳ್ವ ಅವರಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ವಾರ್ಷಿಕ ಪ್ರಶಸ್ತಿ

- Advertisement -
- Advertisement -

ಬೆಂಗಳೂರು: 2021ನೇ ಸಾಲಿನ ಕನ್ನಡ ಪುಸ್ತಕ ಪ್ರಾಧಿಕಾರದ ವಾರ್ಷಿಕ ಪ್ರಶಸ್ತಿಗಳು ಪ್ರಕಟವಾಗಿವೆ.

ಮೂಡಬಿದಿರೆಯ ಆಳ್ವಾಸ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರಿಗೆ ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ ಘೋಷಣೆಯಾಗಿದೆ. ಪ್ರಶಸ್ತಿ 50 ಸಾವಿರ ರೂಪಾಯಿ ನಗದು ಒಳಗೊಂಡಿದೆ.

ಇಂದು ಬೆಂಗಳೂರಿನಲ್ಲಿ ನಡೆದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎ‌ನ್. ನಂದೀಶ್ ಹಂಚೆ ಅಧ್ಯಕ್ಷತೆಯಲ್ಲಿ ನಡೆದ ಸ್ಥಾಯಿ ಸಮಿತಿ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಪ್ರಶಸ್ತಿ ಆಯ್ಕೆ ಮಾಡಲಾಗಿದೆ.

ಶೀಘ್ರದಲ್ಲೇ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

- Advertisement -

Latest News

error: Content is protected !!