- Advertisement -
- Advertisement -
ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯ ನಟ, ಮತ್ತು ಬಿಜೆಪಿ ಮುಖಂಡ ಬುಲೆಟ್ ಪ್ರಕಾಶ್ ಅವರು ಆರೋಗ್ಯ ಸ್ಥಿತಿ ಗಂಭಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬುಲೆಟ್ ಪ್ರಕಾಶ್ ಅವರು ಆರೋಗ್ಯ ಸಮಸ್ಯೆಯಿಂದಾಗಿ ಎರಡು ದಿನಗಳ ಹಿಂದೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರ ಸ್ಥಿತಿ ಗಂಭೀರವಾಗಿರುವ ಕಾರಣ ಅವರನ್ನು ವೆಂಟಿಲೇಟರ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಬುಲೆಟ್ ಪ್ರಕಾಶ್ ಅವರು ಕಿಡ್ನಿ ವೈಫಲ್ಯ ಮತ್ತು ಸೋಂಕಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಮೊನ್ನೆಯಷ್ಟೆ ಬುಲೆಟ್ ಪ್ರಕಾಶ್ ಅವರ ಪುತ್ರ, ‘ತಂದೆಯವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ಆಗಿದೆ ಅಷ್ಟೆ ಯಾವುದೇ ಸಮಸ್ಯೆ ಇಲ್ಲ’ ಎಂದಿದ್ದರು. ಆದರೀಗ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡುತ್ತಿರುವುದಾಗಿ ಆಸ್ಪತ್ರೆ ಮೂಲಗಳು ಹೇಳಿವೆ.
- Advertisement -