Thursday, May 16, 2024
Homeತಾಜಾ ಸುದ್ದಿಹೈಕೋರ್ಟ್‌ನಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ಸೂಚನೆ

ಹೈಕೋರ್ಟ್‌ನಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ಸೂಚನೆ

spot_img
- Advertisement -
- Advertisement -

ʻಕನ್ನಡ ಕಲಿಕೆ ಕಡ್ಡಾಯʼ ಆದೇಶಕ್ಕೆ ರಾಜ್ಯದ ಕಾಲೇಜುಗಳಲ್ಲಿ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಮಾಡುವಂತೆ ಕೋರಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕರ್ನಾಟಕ ಹೈಕೋರ್ಟ್‌ಗೆ ಸೋಮವಾರ ಮಧ್ಯಂತರ ಅರ್ಜಿ ಸಲ್ಲಿಸಿದೆ.

ಇನ್ನು ಪದವಿ ಹಂತದಲ್ಲಿ ಭಾಷೆಯನ್ನು ಕನ್ನಡ ಕಡ್ಡಾಯ ಕಲಿಕೆ ಆದೇಶ ವಿರೋಧಿಸಿ ‘ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌ ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ’, ‘ಹಯಗ್ರೀವ ಟ್ರಸ್ಟ್‌’, ʼವ್ಯೋಮಾ ಲಿಂಗ್ವಿಸ್ಟಿಕ್‌ ಲ್ಯಾಬ್ಸ್‌ ಫೌಂಡೇಶನ್‌ʼ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು. ಜತೆಗೆ, “ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡಿರುವ ಭಾಷಾ ಅಧ್ಯಯನ ಮುಂದುವರಿಸಲು ಸ್ವತಂತ್ರರು” ಎಂಬ ಆದೇಶ ನೀಡಬೇಕು ಎಂದು ಕೋರಿ ಶಿವಕುಮಾರ್‌ ಕೆ ಜಿ ಸೇರಿದಂತೆ ಆರು ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾದ ಅಲೋಕ್‌ ಅರಾಧೆ ಮತ್ತು ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಈ ವೇಳೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪರ ವಕೀಲರು ಮಧ್ಯಂತರ ಅರ್ಜಿಯನ್ನು ಸಲ್ಲಿಸಿರುವ ವಿಚಾರ ಪ್ರಸ್ತಾಪಿಸಿದರು. “ರಾಜ್ಯ ಸರ್ಕಾರದ ನಿಲುವನ್ನು ಪ್ರಾಧಿಕಾರ ಬೆಂಬಲಿಸುತ್ತದೆ. ಆದ್ದರಿಂದ ಕನ್ನಡ ಕಲಿಕೆ ಕಡ್ಡಾಯ ಆದೇಶದ ಅನುಷ್ಠಾನಕ್ಕೆ ನೀಡಿರುವ ತಡೆಯಾಜ್ಞೆ ತೆರವು ಮಾಡಬೇಕು” ಎಂದು ಕೋರಿದರು. ಇನ್ನು ಅದಕ್ಕೆ ಪ್ರತಿಕ್ರಿಯಿಸಿದ ಪೀಠ, ಪ್ರಾಧಿಕಾರದ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ ಕಾಲಾವಕಾಶ ನೀಡಿ ವಿಚಾರಣೆಯನ್ನು ಸೆಪ್ಟೆಂಬರ್‌ಗೆ ಮುಂದೂಡಿತು. 2021ರ ಡಿಸೆಂಬರ್‌ 6ರಂದು ಮಧ್ಯಂತರ ಆದೇಶ ನೀಡಿದ್ದ ಪೀಠವು ರಾಜ್ಯದಲ್ಲಿ ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯ ಮಾಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.

- Advertisement -
spot_img

Latest News

error: Content is protected !!