Friday, April 19, 2024
Homeಕರಾವಳಿಉಡುಪಿ2022ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ; ಕರಾವಳಿಗೆ 10 ಪ್ರಶಸ್ತಿ ಘೋಷಣೆ

2022ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ; ಕರಾವಳಿಗೆ 10 ಪ್ರಶಸ್ತಿ ಘೋಷಣೆ

spot_img
- Advertisement -
- Advertisement -

ಬೆಂಗಳೂರು: 2022ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 67 ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ 67 ಸಾಧಕರಿಗೆ ಪ್ರಶಸ್ತಿ ಘೋಷಿಸಲಾಗಿದೆ.

ಹೊರನಾಡು ಕ್ಷೇತ್ರದಲ್ಲಿ ಮುಂಬೈನ ದೇವಿದಾಸ ಶೆಟ್ಟಿ, ಆಡಳಿತ ಕ್ಷೇತ್ರದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಡಾ. ಎಲ್.ಹೆಚ್. ಮಂಜುನಾಥ್, ಸಮಾಜಸೇವೆ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರವಿ ಶೆಟ್ಟಿ, ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ ಜಯರಾಮ ಬನಾನ್, ರಂಗಭೂಮಿ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ ಯಕ್ಷಗಾನ ಕಲಾವಿದ ಪ್ರಭಾಕರ ಜೋಷಿ, ಸಂಗೀತ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಾರಾಯಣ ಎಂ., ಜಾನಪದ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ ದೈವ ನರ್ತಕ ಗುಡ್ಡ ಪಾಣಾರ, ಯಕ್ಷಗಾನ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ ಎಂ.ಎ. ನಾಯಕ್, ದಕ್ಷಿಣ ಕನ್ನಡ ಜಿಲ್ಲೆಯ ಸರಪಾಡಿ ಅಶೋಕ್ ಶೆಟ್ಟಿ ಮತ್ತು ನೃತ್ಯ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಮಲಾಕ್ಷ ಆಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಬಾರಿ ಪದ್ಮ ಪ್ರಶಸ್ತಿ ಮಾದರಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲಾಗಿದ್ದು, ನವೆಂಬರ್ 1 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

- Advertisement -
spot_img

Latest News

error: Content is protected !!