- Advertisement -
![]()
- Advertisement -
ಬೆಂಗಳೂರು: ಕನ್ನಡ ರಾಜೋತ್ಸವ ಪ್ರಶಸ್ತಿ ಆಯ್ಕೆಗೆ ರಾಜ್ಯ ಸರ್ಕಾರ ಸಲಹಾ ಸಮಿತಿಯನ್ನು ರಚನೆ ಮಾಡಿದೆ.
ವಿವಿಧ ಕ್ಷೇತ್ರಗಳ ಗಣ್ಯರನ್ನು ಒಳಗೊಂಡ 64 ಸದಸ್ಯರ ಸಲಹಾ ಸಮಿತಿ ರಚನೆ ಮಾಡಲಾಗಿದ್ದು, ವಿವಿಧ ಅಕಾಡೆಮಿಗಳು ಮತ್ತು ಪ್ರಾಧಿಕಾರಗಳ ಅಧ್ಯಕ್ಷರನ್ನು ಪದನಿಮಿತ್ತ ಸದಸ್ಯರಾಗಿ ಹೆಸರಿಸಲಾಗಿದೆ
ಉಡುಪಿ ಜಿಲ್ಲೆಯಿಂದ ಕೆ.ಪಿ. ಸುರೇಶ್, ದಕ್ಷಿಣ ಕನ್ನಡ ಜಿಲ್ಲೆಯಿಂದ ರವೀಶ್, ಸಬೀಹಾ ಭೂಮಿಗೌಡ ಮತ್ತು ಪ್ರೊ. ಶಿವರಾಮ ಶೆಟ್ಟಿ ಅವರನ್ನು ಆಯ್ಕೆ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿದೆ.
ಈ ಬಾರಿ ಪ್ರಶಸ್ತಿಗೆ ಅರ್ಜಿಗಳನ್ನು ಸ್ವೀಕಾರ ಮಾಡುವುದಿಲ್ಲ ಎಂದು ರಾಜ್ಯ ಸರ್ಕಾರದ ಈಗಾಗಲೇ ಸ್ಪಷ್ಟನೆ ನೀಡಿದೆ.
ನವೆಂಬರ್ 1 ರಂದು ಬೆಂಗಳೂರಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
- Advertisement -


