Sunday, May 19, 2024
Homeಕರಾವಳಿಬೆಳ್ತಂಗಡಿ: ಶಾಲೆಯೊಂದು ಇನ್ನೂ 1 ವರ್ಷ ಸಂಪೂರ್ಣ ಬಂದ್..!

ಬೆಳ್ತಂಗಡಿ: ಶಾಲೆಯೊಂದು ಇನ್ನೂ 1 ವರ್ಷ ಸಂಪೂರ್ಣ ಬಂದ್..!

spot_img
- Advertisement -
- Advertisement -

ಬೆಳ್ತಂಗಡಿ,ಜೂ.13:ಕೊರೊನಾ ಆರ್ಭಟದಿಂದಾಗಿ ಮಕ್ಕಳ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಇಡೀ ರಾಜ್ಯದಲ್ಲಿ ಚರ್ಚೆಗಳು ನಡೆಯುತ್ತಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾಸಂಸ್ಥೆಯೊಂದು 1 ವರ್ಷ ಶಾಲೆ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಿದೆ.

ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಶ್ರೀ ಆತ್ಮಾನಂದ ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾಲಯ ಈ ಮಹತ್ವದ ನಿರ್ಧಾರ ಕೈಗೊಂಡಿರುವುದು. ಧರ್ಮಸ್ಥಳದ ಸಮೀಪ ಇರುವ ಕನ್ಯಾಡಿಯ ಈ ಶಾಲೆಯಲ್ಲಿ ಸುಮಾರು 350 ಕ್ಕೂ ಹೆಚ್ಚು ಮಕ್ಕಳು ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. 350 ಮಕ್ಕಳ ಪೈಕಿ 250ರಷ್ಟು ಮಕ್ಕಳು 12ವರ್ಷದೊಳಗಿನವರಾಗಿದ್ದಾರೆ. ಹೀಗಾಗಿ ಮಕ್ಕಳ ಪೋಷಕರ ಅಭಿಪ್ರಾಯ ಪಡೆದು ಶಾಲಾ ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿದೆ.

ಪೋಷಕರು ಬೇರೆ ಶಾಲೆಗೆ ಸೇರಲು ಇಚ್ಚಿಸಿದರೆ ವರ್ಗಾವಣೆ ಪತ್ರ ನೀಡುತ್ತೇವೆ, ಶಾಲೆಯ ಈ ನಿರ್ಧಾರದ ಬಗ್ಗೆ ಶಿಕ್ಷಣ ಸಚಿವರಿಗೆ, ಶಿಕ್ಷಣ ಇಲಾಖೆಗೆ ಮಾಹಿತಿ ನೀಡಿದ್ದೇವೆ ಎಂದು ಬ್ರಹ್ಮಾನಂದ ಸ್ವಾಮೀಜಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!