- Advertisement -
- Advertisement -
ವಿಟ್ಲ: ಜ್ವರದಿಂದ ತೀವ್ರವಾಗಿ ಬಳಲುತ್ತಿದ್ದ ಕನ್ಯಾನ ಗ್ರಾಮದ ಯುವಕ ವ್ಯಕ್ತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ವರ್ಗಾವಣೆ ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದಾರೆ.
ಕನ್ಯಾನ ಶಂಬರಮೂಲೆ ನಿವಾಸಿ ಚಂದ್ರಹಾಸ (31) ಅವರು ಮೃತ ದುರ್ದೈವಿ.
ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರತೆ ಹೆಚ್ಚಾದ ಹಿನ್ನಲೆಯಲ್ಲಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
- Advertisement -