Thursday, June 4, 2026
Homeಕರಾವಳಿಕಾಪು ಮಾರಿಯಮ್ಮ ದರ್ಶನ ಪಡೆದ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಪತ್ನಿ

ಕಾಪು ಮಾರಿಯಮ್ಮ ದರ್ಶನ ಪಡೆದ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಪತ್ನಿ

- Advertisement -
- Advertisement -

ಉಡುಪಿ: ಭಾರತದ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು.

ದೇವಿಶಾ ಅವರಿಗೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮಾದವ ಆರ್. ಪಾಲನ್ ಹಾಗೂ ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!