Friday, June 5, 2026
Homeಕರಾವಳಿಉಡುಪಿಉಡುಪಿ: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಕ್ವಾಟ್ರಸ್ ನಲ್ಲೇ ಆತ್ಮಹತ್ಯೆ

ಉಡುಪಿ: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಕ್ವಾಟ್ರಸ್ ನಲ್ಲೇ ಆತ್ಮಹತ್ಯೆ

- Advertisement -
- Advertisement -

ಉಡುಪಿ: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಕ್ವಾಟ್ರಸ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ಜ್ಯೋತಿ(29) ಆತ್ಮಹತ್ಯೆ ಮಾಡಿಕೊಂಡವರು. ಇಂದು ಬೆಳಗ್ಗೆ ಜ್ಯೋತಿ ತಮ್ಮ ಕ್ವಾಟ್ರಸ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿನ್ನೆ ಜ್ಯೋತಿ ಎಂದಿನಂತೆ ಕೆಲಸ ಮುಗಿಸಿ ರಾತ್ರಿ ಕ್ವಾಟ್ರಸ್ ಗೆ ಬಂದಿದ್ದರು. ಜ್ಯೋತಿ ಅವರ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು ಅವರು ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದ ವೇಳೆ ಪತ್ನಿ ಜ್ಯೋತಿ ನೇಣಿಗೆ ಶರಣಾಗಿರೋದು ಗೊತ್ತಾಗಿದೆ.

 ತಕ್ಷಣ ಪಕ್ಕದಲ್ಲಿರುವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಇನ್ನು ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಜ್ಯೋತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!