Thursday, June 4, 2026
Homeತಾಜಾ ಸುದ್ದಿಉದುರುತ್ತಿವೆ ಕಮಲದ ಒಂದೊಂದೇ “ದಳ”ಗಳು; ಬಿಜೆಪಿಗೆ ಗುಡ್ ಬೈ ಹೇಳಲು ಸಿದ್ಧರಾದ ಸಂಸದ ಸಂಗಣ್ಣ ಕರಡಿ

ಉದುರುತ್ತಿವೆ ಕಮಲದ ಒಂದೊಂದೇ “ದಳ”ಗಳು; ಬಿಜೆಪಿಗೆ ಗುಡ್ ಬೈ ಹೇಳಲು ಸಿದ್ಧರಾದ ಸಂಸದ ಸಂಗಣ್ಣ ಕರಡಿ

- Advertisement -
- Advertisement -

ಕೊಪ್ಪಳ : ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲೇ ಬಿಜೆಪಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತನೇ ಇದೆ. ನಿನ್ನೆಯಷ್ಟೇ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿ ಶಾಕ್ ಕೊಟ್ಟಿದ್ದರು.ಅದರ ಬೆನ್ನಲ್ಲೇ ಇದೀಗ ಕಮಲದ ಮತ್ತೊಂದು ದಳ ಉದುರೋದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಸಂಸದ ಸಂಗಣ್ಣಿ ಕರಣಿ ಬಿಜೆಪಿಗೆ ಗುಡ್ ಬೈ ಹೇಳುವ ಸಾಧ್ಯತೆ ಇದೆ ನ್ನೋ ಸುದ್ದಿ ಜೋರಾಗಿದೆ.

ಕೊಪ್ಪಳ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರು ಇಂದು ಕಾರ್ಯಕರ್ತರ ಸಭೆ ಕರೆದಿದ್ದು, ಸಭೆಯ ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಎ ನೀಡಲು ಮುಂದಾಗಿದ್ದು, ದೆಹಲಿಗೆ ತೆರಳಿ ಲೋಕಸಭಾ ಸ್ಪೀಕರ್ ರಾಜೀನಾಮೆ ನೀಡಲಿದ್ದಾರೆ. ಬಳಿಕ ಜೆಡಿಎಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಈಗಾಗಲೇ ಎರಡು ಪಟ್ಟಿ ಬಿಡುಗಡೆ ಮಾಡಿದ್ದು, ಕೊಪ್ಪಳ ಕ್ಷೇತ್ರದ ಅಭ್ಯರ್ಥಿ ಹೆಸರು ಇನ್ನೂ ಘೋಷಣೆ ಆಗಿಲ್ಲ. ಬಿಜೆಪಿ ಹೈಕಮಾಂಡ್ ನಡೆಗೆ ಆಂತರಿಕ ಅಸಮಾಧಾನ ಹೊಂದಿರುವ ಕರಡಿ ಸಂಗಣ್ಣ ಅವರು ಜೆಡಿಎಸ್ ನಿಂದ ಸ್ಪರ್ಧೆಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -

Latest News

error: Content is protected !!