Friday, April 26, 2024
Homeಕರಾವಳಿಉಡುಪಿಫೆಬ್ರವರಿ 5 ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಪ್ರಜಾಧ್ವನಿ ಯಾತ್ರೆ ಆರಂಭ

ಫೆಬ್ರವರಿ 5 ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಪ್ರಜಾಧ್ವನಿ ಯಾತ್ರೆ ಆರಂಭ

spot_img
- Advertisement -
- Advertisement -

ಮಂಗಳೂರು: ಫೆಬ್ರವರಿ 5 ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಪ್ರಜಾಧ್ವನಿ ಯಾತ್ರೆ ಆರಂಭವಾಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

‘ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ‘ಕರಾವಳಿ- ಮಲೆನಾಡು ಪ್ರಜಾಧ್ವನಿ ಯಾತ್ರೆ ನಡೆಸಲಾಗುತ್ತದೆ’ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದ್ದಾರೆ.

ಕರಾವಳಿ, ಮಲೆನಾಡು ಭಾಗದ ಕೋಮು ಸಾಮರಸ್ಯ ಮರುಸ್ಥಾಪನೆ, ಅಭಿವೃದ್ಧಿ, ಸಮೃದ್ಧಿಯ ಬಗ್ಗೆ ಜನಜಾಗೃತಿ ಮೂಡಿಸುವುದು ಈ ಯಾತ್ರೆಯ ಉದ್ದೇಶ. ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಪಕ್ಷದ ಮುಖಂಡರಾದ ಆರ್‌.ವಿ.ದೇಶಪಾಂಡೆ, ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಯು.ಟಿ. ಖಾದರ್, ಅಭಯಚಂದ್ರ ಜೈನ್ ಹಾಗೂ ಮಧು ಬಂಗಾರಪ್ಪ ನೇತೃತ್ವದಲ್ಲಿ ಯಾತ್ರೆ ನಡೆಯಲಿದೆ’ ಎಂದಿದ್ದಾರೆ.

ಬಿ.ಕೆ.ಹರಿಪ್ರಸಾದ್‌, ‘ಈ ಜಿಲ್ಲೆಗಳ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಈ ಯಾತ್ರೆ ನಡೆಯಲಿದೆ. ಫೆ.5ರಿಂದ 9ರವರೆಗೆ ಮೊದಲ ಹಂತದಲ್ಲಿ ಹಾಗೂ ಫೆ. 16ರಿಂದ ಮಾರ್ಚ್‌ 10ರವರೆಗೆ ಎರಡನೇ ಹಂತದ ಯಾತ್ರೆ ನಡೆಯಲಿದೆ. ಫೆ5ರಂದು ಸುಳ್ಯದಲ್ಲಿ ಯಾತ್ರೆಗೆ ಚಾಲನೆ ನೀಡಲಾಗುವುದು. ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಭೆಗಳನ್ನು ಹಮ್ಮಿಕೊಳ್ಳಲಿದ್ದು, ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ’ ಎಂದಿದ್ದಾರೆ.

- Advertisement -
spot_img

Latest News

error: Content is protected !!