ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಗೆ ಕಪ್ಪು ಬಾವುಟ ತೋರಿಸಲು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್ ಶೆಟ್ಟಿ ಬಣ ತೀರ್ಮಾನಿಸಿದೆ.
ಇಂದು ಮಧ್ಯಾಹ್ನ ಕೊಲ್ಲೂರಿಗೆ ವಿಜಯ್ ಭೇಟಿ ನೀಡುತ್ತಿದ್ದು ಈ ವೇಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಉಡುಪಿ ಜಿಲ್ಲೆಯಲ್ಲಿ ರಸ್ತೆ ಮಾರ್ಗವಾಗಿ ಸಾಗುವ ವೇಳೆ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವುದಕ್ಕಾಗಿ ಕಪ್ಪು ಬಾವುಟ ತೋರಿಸಲು ಕರವೇ ನಿರ್ಧರಿಸಿದೆ.
ತಮಿಳುನಾಡು ಸಿಎಂ ಆಗಮನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪೊಲೀಸರಿಂದ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಚೆನ್ನೈನಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸುವ ವಿಜಯ್ ಬಳಿಕ ರಸ್ತೆ ಮಾರ್ಗವಾಗಿ ಝೀರೋ ಟ್ರಾಫಿಕ್ ನಲ್ಲಿ ಕೊಲ್ಲೂರಿಗೆ ತೆರಳಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಸಿಎಂ ವಿಜಯ್ 3.30 ಗಂಟೆಗೆ ನಿರ್ಗಮಿಸಲಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಭೇಟಿಯ ವೇಳೆ ಮೂಕಾಂಬಿಕಾ ದೇವಸ್ಥಾನಕ್ಕೆ ಭಕ್ತರಿಗೆ ಭೇಟಿ ನಿರ್ಬಂಧಿಸಲಾಗಿದೆ


