- Advertisement -
- Advertisement -
ಕಾರ್ಕಳ: ಇಲ್ಲಿನ ಜೋಡು ರಸ್ತೆಯಲ್ಲಿರುವ ಇತ್ತೀಚೆಗೆ ಪೂರ್ಣಗೊಂಡ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್ ಪೈ (51) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ (ಅ. 6) ಬೆಳಗ್ಗೆ ನಡೆದಿದೆ.
ಮಂಜುನಾಥ್ ಪೈ (ಮಂಜಣ್ಣ) ಅವರು ಹಣಕಾಸಿನ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕಾರ್ಕಳ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
- Advertisement -


