Wednesday, June 24, 2026
Homeಕರಾವಳಿಉಡುಪಿಕಾರ್ಕಳ : ಬೈಕ್‌ಗೆ ಕಾರು ಡಿಕ್ಕಿ, ಸವಾರನಿಗೆ ಗಾಯ

ಕಾರ್ಕಳ : ಬೈಕ್‌ಗೆ ಕಾರು ಡಿಕ್ಕಿ, ಸವಾರನಿಗೆ ಗಾಯ

- Advertisement -
- Advertisement -

ಕಾರ್ಕಳ : ಬೈಕ್‌ಗೆ ಕಾರು ಡಿಕ್ಕಿಯಾಗಿ ಸವಾರನಿಗೆ ಗಾಯಗಳಾಗಿರುವ ಘಟನೆ ಮಿಯ್ಯಾರು ಕಂಬಳ ಕ್ರಾಸ್‌ನಲ್ಲಿ ನಡೆದಿದೆ.

ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ ಕಿರಣ್ ಎಂಬುವವರು ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್‌ಗೆ ಬಜಗೋಳಿ ಕಡೆಯಿಂದ ಕಾರ್ಕಳ ಕಡೆಗೆ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ಆದರ್ಶ ಎಂಬವರು ಕಾರನ್ನು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ಬೈಕ್‌ ಸವಾರ ಕಿರಣ್‌ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಟಿಎಂಎಪೈ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

- Advertisement -

Latest News

error: Content is protected !!