Saturday, September 19, 2026
Homeಕರಾವಳಿಉಡುಪಿಕಾರ್ಕಳ: ಕಾರು ಡಿಕ್ಕಿಯಾಗಿ ವೃದ್ಧ ಸಾವು

ಕಾರ್ಕಳ: ಕಾರು ಡಿಕ್ಕಿಯಾಗಿ ವೃದ್ಧ ಸಾವು

- Advertisement -
- Advertisement -

ಕಾರ್ಕಳ: ಮುಂಡ್ಕೂರು–ಬೆಳ್ಮಣ್ ರಾಜ್ಯ ಹೆದ್ದಾರಿಯ ಮುಲ್ಲಡ್ಕ ಗ್ರಾಮದ ಕೊಡಿಮಾರಿನಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ವಸಂತ ಮೂಲ್ಯ (73) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 18ರಂದು ಸಂಜೆ ಬಸ್‌ನಿಂದ ಇಳಿದು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ, ಮುಂಡ್ಕೂರು ಕಡೆಯಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!