Thursday, June 4, 2026
Homeಕರಾವಳಿಉಡುಪಿಕಾರ್ಕಳ: ಕಾರು ಮತ್ತ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತ; ತಂದೆ ಸಾವು, ಮಗಳಿಗೆ ...

ಕಾರ್ಕಳ: ಕಾರು ಮತ್ತ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತ; ತಂದೆ ಸಾವು, ಮಗಳಿಗೆ  ಗಂಭೀರ ಗಾಯ

- Advertisement -
- Advertisement -

ಕಾರ್ಕಳ: ಕಾರು ಮತ್ತ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿ ತಂದೆ ಸಾವನ್ನಪ್ಪಿ, ಮಗಳು ಗಂಭೀರ ಗಾಯಳಾಗಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ನಿಟ್ಟೆ ಗ್ರಾಮದ ‘ನಿಟ್ಟೆ ಫಾರ್ ಎವರ್’ ಹೋಟೆಲ್ ಮುಂಭಾಗ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಕಾರ್ಕಳದ ನಿವಾಸಿ ನವೀನ್ ಚಂದ್ರ ಅವರು ತನ್ನ ಮಗಳು ಪ್ರೇರಣಾ ಅವರನ್ನು ಬೈಕ್‌ನಲ್ಲಿ ಕುಳ್ಳಿರಿಸಿಕೊಂಡು ನಿಟ್ಟೆ ಕಡೆಯಿಂದ ಕಾರ್ಕಳಕ್ಕೆ ಬರುತ್ತಿದ್ದಾಗ ಕಾರ್ಕಳ ಕಡೆಯಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ತೀರಾ ಬಲಬದಿಗೆ ಬಂದು ಬೈಕ್‌ಗೆ ನೇರವಾಗಿ ಢಿಕ್ಕಿ ಹೊಡೆದಿದ್ದಾನೆ.

ಅಪಘಾತದ ತೀವ್ರತೆಗೆ ತೀವ್ರವಾಗಿ ಗಾಯಗೊಂಡಿದ್ದ ನವೀನ್ ಚಂದ್ರ ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಗಳು ಪ್ರೇರಣಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಬಿಎನ್‌ಎಸ್ (BNS) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!