Wednesday, June 3, 2026
Homeಕರಾವಳಿಉಡುಪಿಕಾರ್ಕಳ ಸಾಮೂಹಿಕ ಅತ್ಯಾಚಾರ ಪ್ರಕರಣ; ಇಬ್ಬರ ಬಂಧನ, ಪರಿಚಿತ ಯುವಕ ಹಾಗೂ ಆತನ ಸ್ನೇಹಿತರಿಂದಲೇ ಕೃತ್ಯ

ಕಾರ್ಕಳ ಸಾಮೂಹಿಕ ಅತ್ಯಾಚಾರ ಪ್ರಕರಣ; ಇಬ್ಬರ ಬಂಧನ, ಪರಿಚಿತ ಯುವಕ ಹಾಗೂ ಆತನ ಸ್ನೇಹಿತರಿಂದಲೇ ಕೃತ್ಯ

- Advertisement -
- Advertisement -

ಉಡುಪಿ; ಕಾರ್ಕಳ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರನ್ನು  ಬಂಧಿಸಿದ್ದಾರೆ. ಪರಿಚಿತ ಯುವಕ ಹಾಗೂ ಆತನ ಸ್ನೇಹಿತರಿಂದಲೇ ಕೃತ್ಯವೆಸಗಿದ್ದಾರೆ.ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಲ್ತಾಫ್ ಹಾಗೂ ಸುಬೇರ್ ಬಂಧಿತರು.

ಸಂತ್ರಸ್ತೆ ಯುವತಿಗೆ ಆರೋಪಿ ಅಲ್ತಾಫ್ ಗೆ ಇನ್ಸ್ಟಾಗ್ರಾಂ ಮೂಲಕ ಪರಿಚತನಾಗಿದ್ದ. ಶುಕ್ರವಾರ ಆರೋಪಿ ಯುವತಿ ಕರೆ ಮಾಡಿ ಪುಸಲಾಯಿಸಿ ಸುತ್ತಾಡಲು ಕರೆದುಕೊಂಡು ಹೋಗಿದ್ದಾನೆ. ನಂತರ ತನ್ನ ಇಬ್ಬರು ಸ್ನೇಹಿತರನ್ನು ಕರೆಸಿ ಬಿಯರ್ ಬಾಟಲಿ ತರಿಸಿ ಆ ಬಿಯರ್‌ನಲ್ಲಿ ಮತ್ತು ಬರಿಸುವ ಔಷಧಿ ಹಾಕೋ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.

ಅತ್ಯಾಚಾರವೆಸಗಿದ ಬಳಿಕ ಸಂತ್ರಸ್ತೆಯನ್ನು ಆಕೆಯ ಬಳಿಯೇ  ಬಿಟ್ಟು ಹೋಗಿದ್ದಾರೆ. ಸದ್ಯ ಯುವತಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಉಡುಪಿ ಜಿಲ್ಲಾ ಎಸ್‌ ಪಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರಗೈದ ದೂರು ಬಂದಿದೆ. ಸಂತ್ರಸ್ತೆ ಮತ್ತು ಆರೋಪಿಗೆ ಮೂರು ತಿಂಗಳ ಹಿಂದೆ  ಇನ್‌ಸ್ಟಾಗ್ರಾಮ್‌ ಮೂಲಕ ಪರಿಚಯವಾಗಿತ್ತು. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಕಾರಿನಲ್ಲಿ ಅಪಹರಿಸಿದ್ದಾನೆ.ಈ ನಡುವೆ ಮದ್ಯಪಾನದಲ್ಲಿ ಏನೋ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ. ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!