ಉಡುಪಿ: ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಭಯ್(23) ಕಾರ್ಕಳ ಬಂಧಿತ ಆರೋಪಿ.
ಈತ ಪ್ರಕರಣದ ಎ1 ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಪೂರೈಸಿದ್ದ ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಇದು ಬಯಲಾಗಿದೆ. ಘಟನೆ ಬಳಿಕ ಆರೋಪಿ ಅಲ್ತಾಫ್ ಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಲು ಮುಂದಾಗಿದ್ದನು ಎನ್ನಲಾಗಿದೆ.
ಇಂದು ಆರೋಪಿ ಅಭಯ್ ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಂಡು, ಆತನನ್ನು ಸಂಪೂರ್ಣ ತನಿಖೆ ನಡೆಸಿ, ಮುಂದೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
NDPS ಪ್ರಕರಣದಲ್ಲಿ ಅಭಯ್ ನನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಸಂಶಯವಿರುವ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದು, ಅವರ ತನಿಖೆ ನಡೆಸಿ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಡಾ.ಕೆ.ಅರುಣ್ ತಿಳಿಸಿದ್ದಾರೆ.ಅಲ್ತಾಫ್ ಹಾಗೂ ಶ್ರಾವೆದ್ ರಿಚರ್ಡ್ ಕ್ವಾಡ್ರಸ್ ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.