Sunday, June 7, 2026
Homeಕರಾವಳಿಉಡುಪಿಕಾರ್ಕಳ: ಆಕಸ್ಮಿಕವಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

ಕಾರ್ಕಳ: ಆಕಸ್ಮಿಕವಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

- Advertisement -
- Advertisement -

ಕಾರ್ಕಳ: ಆಕಸ್ಮಿಕವಾಗಿ ಬಾವಿಗೆ ಬಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ ಘಟನೆ ಅಜೆಕಾರು ಕೈಕಂಬ ಎಂಬಲ್ಲಿ  ನಡೆದಿದೆ. ಸುಕುಮಾರ(40) ಎಂಬವರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ.

ಸುಕುಮಾರ ಅವರು ಬಾವಿಗೆ ಬಿದ್ದ ಸುದ್ದಿ ತಿಳಿದು ಡೆದ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಬಾವಿಗೆ ಬಿದ್ದಿದ್ದ ವ್ಯಕ್ತಿಯನ್ನು ಮೇಲೆಕ್ಕೆ ಎತ್ತಿ ರಕ್ಷಣೆ ಮಾಡಿದ್ದಾರೆ ಎಂದು ಸ್ಥಳೀಯುರು ತಿಳಿಸಿದ್ದಾರೆ. ಆಕಸ್ಮಿಕವಾಗಿ ವ್ಯಕ್ತಿ ಬಾವಿಗೆ ಬಿದ್ದಿರಬೇಕೆಂದು ಶಂಕಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಬಿ ಎಂ ಸಂಜೀವ್, ದಪೆದರ್ ಅಚ್ಚುತ ಸಿಬ್ಬಂದಿ ಚಂದ್ರಶೇಖರ್, ನಿತ್ಯಾನಂದ, ಸುಜಯ್, ಉಮೇಶ್, ವಿನಾಯಕ, ಸಂಜಯ್ ಪಾಲ್ಗೊಂಡಿದ್ದರು

- Advertisement -

Latest News

error: Content is protected !!