Friday, June 5, 2026
Homeಕರಾವಳಿಉಡುಪಿಕಾರ್ಕಳ: ಸಚ್ಚೇರಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮಹಿಳಾ ಸಿಬ್ಬಂದಿಗೆ ಕೊರೋನಾ ಪಾಸಿಟಿವ್

ಕಾರ್ಕಳ: ಸಚ್ಚೇರಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮಹಿಳಾ ಸಿಬ್ಬಂದಿಗೆ ಕೊರೋನಾ ಪಾಸಿಟಿವ್

- Advertisement -
- Advertisement -

ಕಾರ್ಕಳ: ತಾಲೂಕಿನ ಸಚ್ಚೇರಿಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮಹಿಳಾ ಸಿಬ್ಬಂದಿಯೋರ್ವರಿಗೆ ಕೊರೋನಾ ಪಾಸಿಟಿವ್ ಆಗಿರುವುದು ವರದಿಯಾಗಿದೆ.

ಡಿ ದರ್ಜೆಯ ಮಹಿಳಾ ನೌಕರೆಗೆ ಕೊರೋನಾ ಪಾಸಿಟಿವ್ ಆಗಿರುವ ಕಾರಣ ಸಚ್ಚೇರಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರನ್ನು, ಸಿಬ್ಬಂದಿಗಳನ್ನು ಹೋಂ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದ್ದು, ಆರೋಗ್ಯ ಕೇಂದ್ರವನ್ನು ಮುಂದಿನ ಮೂರು ದಿನಗಳಿಗೆ ಸೀಲ್ ಡೌನ್ ಮಾಡಲಾಗಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸ್ಯಾನಿಟೈಸ್ ಮಾಡಿ ನಂತರ ತೆರೆಯಲಾಗುವುದು ಎಂದು ವರದಿಯಾಗಿದೆ.

- Advertisement -

Latest News

error: Content is protected !!