Friday, June 5, 2026
Homeಕರಾವಳಿಕಾರ್ಕಳ ಸುದೀಪ್ ರೈ ಸಾವು ಪ್ರಕರಣ; ಪೋಷಕರಿಂದ ಉನ್ನತ ಮಟ್ಟದ ತನಿಖೆಗೆ ಆಗ್ರಹ

ಕಾರ್ಕಳ ಸುದೀಪ್ ರೈ ಸಾವು ಪ್ರಕರಣ; ಪೋಷಕರಿಂದ ಉನ್ನತ ಮಟ್ಟದ ತನಿಖೆಗೆ ಆಗ್ರಹ

- Advertisement -
- Advertisement -

ಮಂಗಳೂರು: ‘ಸುದೀಪ್ ರೈ ಸಾವಿಗೆ ಆತನ ಪತ್ನಿ ನೀಡಿರುವ ಮಾನಸಿಕ ಹಿಂಸೆ, ಕಿರುಕುಳವೇ ಕಾರಣವಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಇತ್ತೀಚೆಗೆ ಸಾವಿಗೀಡಾಗಿರುವ ಸುದೀಪ್ ರೈ ಅವರ ಪೋಷಕರು ಆಗ್ರಹಿಸಿದ್ದಾರೆ.

ಅವರು ಮಂಗಳವಾರದಂದು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದು, ಮಗನ ಪತ್ನಿ ಆಹಾರದಲ್ಲಿ ವಿಷ ನೀಡಿದ್ದಾಳೆ ಎಂದು ಆರೋಪಿಸಿದ್ದಾರೆ. ಅಷ್ಟೇಅಲ್ಲದೇ ಮಾ. 17ರಂದು ಆತನ ಪತ್ನಿ ನೆಲ್ಯಾಡಿ ಪೇಟೆಯಲ್ಲಿ ನಡೆಸಿದ ಗಲಾಟೆಯೇ ಮುಖ್ಯ ಕಾರಣಾಗಿದ್ದು, ನಂತರ ಆಕೆ ಅಲ್ಲಿಂದ ನನ್ನ ಮಗನಿಗೆ ಜೀವ ಬೆದರಿಕೆ ಒಡ್ಡಿ ಆತನನ್ನು ಕರೆದೊಯ್ದು ಮಾನಸಿಕ ಹಿಂಸೆ ನೀಡಿದ್ದಾಳೆ. ಬಳಿಕ ಆತನ ಪರಿಸ್ಥಿತಿ ಚಿಂತಾಜನಕವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾ. 29ರಂದು ಮುಂಜಾನೆ ಆತ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!