Saturday, May 4, 2024
Homeತಾಜಾ ಸುದ್ದಿಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗೆ ತಾತ್ವಿಕ ಒಪ್ಪಿಗೆ - ಸಿಎಂ ಸಿದ್ದರಾಮಯ್ಯ

ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗೆ ತಾತ್ವಿಕ ಒಪ್ಪಿಗೆ – ಸಿಎಂ ಸಿದ್ದರಾಮಯ್ಯ

spot_img
- Advertisement -
- Advertisement -

ಬೆಂಗಳೂರು :ಕಾಂಗ್ರೆಸ್ ನುಡಿದಂತೆ ನಡೆಯುತ್ತದೆ. ನಾವು ಕರ್ನಾಟಕವನ್ನು ಆರ್ಥಿಕ ದಿವಾಳಿಗೆ ಸಿಲುಕಿಸದೆ ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. 5 ಗ್ಯಾರಂಟಿಗಳಿಗೆ ತಾತ್ವಿಕವಾಗಿ ಸಂಪುಟದಲ್ಲಿ ಒಪ್ಪಿಗೆ ನೀಡಿದ್ದೇವೆ ಎಂದು ರಾಜ್ಯದ ನೂತನ ಸಿಎಂ ಸಿದ್ದರಾಮಯ್ಯ ಹೇಳಿದರು.

ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಪತ್ರಿಕಾಗೋಷ್ಟಿ ಕರೆದು, ಮೊದಲ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಇದರಿಂದ 50 ಸಾವಿರ ಕೋಟಿ.ರೂ ಹೊರೆಯಾಗಬಹುದು ಎಂದು ಅಂದಾಜಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯೂನಿಟ್ ಉಚಿತ​​ ವಿದ್ಯುತ್​ ನೀಡುತ್ತೇವೆ. ಇದಕ್ಕೆ ಸುಮಾರು ತಿಂಗಳಿಗೆ 1200 ಕೋಟಿ ರೂ. ಆಗಬಹುದು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 200 ರೂ. ಹಾಕಲಾಗುವುದು. ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ, ಈ ವರ್ಷದ ಪದವೀದರ, ಪಿಎಚ್​ಡಿ, ಎಂಬಿಬಿಎಸ್ ಪದವೀದರ ನಿರುದ್ಯೋಗಿಗಳಿಗೆ ಎರಡೂವರೆ ವರ್ಷಗಳ ವರೆಗೆ ತಿಂಗಳಿಗೆ ಮೂರು ಸಾವಿರ ರೂ. ನೀಡಲಾಗುವುದು. ಈ ನಡುವೆ ಉದ್ಯೋಗ ಸಿಕ್ಕರೆ ಯುವ ನಿಧಿ ನೀಡಲಾಗುವುದಿಲ್ಲ. ಡಿಪ್ಲಮಾ ಪಾಸ್ ಮಾಡಿದ ನಿರುದ್ಯೋಗಿಗಳಿ ಒಂದೂವರೆ ಸಾವಿರ ರೂ., ಎಲ್ಲಾ ಸರ್ಕಾರಿ ಬಸ್​ನಲ್ಲಿ ಪ್ರಯಾಣಿಸುವ ಕರ್ನಾಟಕದ ಮಹಿಳೆಯರಿಗೆ ಫ್ರೀ ಪಾಸ್ ನೀಡಲಾಗುವುದು, ಬೇರೆ ರಾಜ್ಯಗಳ ಮಹಿಳೆಯರಿಗೆ ಈ ಭಾಗ್ಯ ಇರುವುದಿಲ್ಲ ಎಂದು ಹೇಳಿದರು.

ಇದಲ್ಲದೇ ಸ್ಥಗಿತಗೊಂಡಿರುವ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಮತ್ತೆ ಪುನರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

- Advertisement -
spot_img

Latest News

error: Content is protected !!