Friday, May 17, 2024
Homeತಾಜಾ ಸುದ್ದಿಸರ್ಕಾರಿ ನೌಕರರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಶೀಘ್ರ ಚಾಲನೆ:ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಸರ್ಕಾರಿ ನೌಕರರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಶೀಘ್ರ ಚಾಲನೆ:ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

spot_img
- Advertisement -
- Advertisement -

ಬೆಂಗಳೂರು: ಸರ್ಕಾರಿ ನೌಕರರ ಆರೋಗ್ಯ ರಕ್ಷಣೆಗಾಗಿ ನಗದು ರಹಿತ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಲಾಗಿದ್ದು, ಶೀಘ್ರದಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ

ಬೆಂಗಳೂರಿನಲ್ಲಿ ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು – 2022ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವೇಳೆ ಈ ವಿಷಯ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ನೌಕರರ ಸರಿಸಮನಾಗಿ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಿಸಲು 7ನೇ ವೇತನ ಆಯೋಗವನ್ನು ರಚನೆ ಮಾಡಲು ಹಿರಿಯ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರು ಪ್ರಮುಖ ಕಾರಣರು ಎಂದು ಸಿಎಂ ತಿಳಿಸಿದ್ದಾರೆ.

ಈ ವರ್ಷದಲ್ಲಿ 7 ನೇ ವೇತನ ಆಯೋಗ ರಚಿಸಿ, ಸರ್ಕಾರಿ ನೌಕರರ ವೇತನದ ತಾರತಮ್ಯವನ್ನು ಸರಿದೂಗಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿರುವ ಬಸವರಾಜ ಬೊಮ್ಮಾಯಿ, ಸರ್ಕಾರಿ ನೌಕರರು ಸಂತೋಷದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ರಾಜ್ಯದ ಜನರಿಗೆ ನ್ಯಾಯ ಒದಗಿಸಲು ಸಾಧ್ಯ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!