Sunday, June 7, 2026
Homeಕರಾವಳಿಮಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆ; ಚಿಕಿತ್ಸೆ...

ಮಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆ; ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು

- Advertisement -
- Advertisement -

ಮಂಗಳೂರು: ಕರ್ನಾಟಕ ಬ್ಯಾಂಕ್ ನ ಜನರಲ್ ಮ್ಯಾನೇಜರ್ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಂಗಳೂರಿನ ಕರ್ನಾಟಕ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ
ವಾದಿರಾಜ ಕೆ.ಎ. (51) ಮೃತಪಟ್ಟಿರುವ ಮ್ಯಾನೇಜರ್ ಆಗಿದ್ದಾರೆ.

ಮಂಗಳೂರು ಹೊರವಲಯದ ಬೊಂದೇಲ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವಾದಿರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.‌ ಅದರೆ ಗಂಭೀರವಾಗಿ ಗಾಯಗೊಂಡಿದ್ದ ವಾದಿರಾಜ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.

ಮೃತ ವಾದಿರಾಜ್ ಅವರ ಪತ್ನಿ ಮತ್ತು ಮಕ್ಕಳು ಮನೆಯಿಂದ ಹೊರಗೆ ಹೋಗಿದ್ದಾಗ ನಡೆದ ಘಟನೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ.

ಕರ್ನಾಟಕ ಬ್ಯಾಂಕ್ ನಲ್ಲಿ ಚೀಫ್ ಕಂಪ್ಲೈಂಟ್ ಆಫೀಸರ್ ಆಗಿದ್ದ ವಾದಿರಾಜ, ಒಂದು ವರ್ಷದಿಂದ ಅಪಾರ್ಟ್ ಮೆಂಟ್ ನಲ್ಲಿ ಬಾಡಿಗೆಗೆ ವಾಸವಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!