Friday, May 17, 2024
Homeತಾಜಾ ಸುದ್ದಿಇಂದು ಇಡೀ ಕರ್ನಾಟಕವೇ ಬೆಚ್ಚಿ ಬೀಳುವ ದಿನ : ಬರೋಬ್ಬರಿ 53 ಕೊರೋನಾ ಕೇಸ್ ಪತ್ತೆ,...

ಇಂದು ಇಡೀ ಕರ್ನಾಟಕವೇ ಬೆಚ್ಚಿ ಬೀಳುವ ದಿನ : ಬರೋಬ್ಬರಿ 53 ಕೊರೋನಾ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆ

spot_img
- Advertisement -
- Advertisement -

ಬೆಂಗಳೂರು : ಇಂದು ಇಡೀ ಕರ್ನಾಟಕವೇ ಬೆಚ್ಚಿ ಬೀಳುವಂತೆ ಕೊರೋನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಪತ್ತೆಯಾಗಿದೆ. ಈ ಹಿಂದೆ ಎಂದೂ ಪತ್ತೆಯಾಗದಷ್ಟು ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು ಒಂದೇ ಒಂದು ದಿನ ಬರೋಬ್ಬರಿ 53 ಕೊರೋನಾ ಹೊಸ ಕೇಸ್ ರಾಜ್ಯದಲ್ಲಿ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಹೊಸದಾಗಿ 53 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿರುವುದಾಗಿ ತಿಳಿದು ಬಂದಿದೆ..

ಅಂದಹಾಗೇ ಇಂದು ಬೆಂಗಳೂರು ನಗರ ಜಿಲ್ಲೆಯ ಮೂವರಿಗೆ, ಉತ್ತರ ಕನ್ನಡ ಜಿಲ್ಲೆಯ ಏಳು ಜನರಿಗೆ, ಚಿಕ್ಕಬಳ್ಳಾಪುರದ ಚಿಂತಾಮಣಿಯ ಒಬ್ಬರಿಗೆ, ಕಲಬುರ್ಗಿಯ ಮೂವರಿಗೆ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಎಂಟು ಜನರಿಗೆ, ಬಾಗಲಕೋಟೆಯ ಎಂಟು ಜನರಿಗೆ, ಬೆಳಗಾವಿಯ 22 ಜನರಿಗೆ ಮತ್ತು ದಾವಣಗೆರೆಯ ಒಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ 53 ಜನರಿಗೆ ಕೊರೋನಾ ಸೋಂಕು ತಗುಲಿ, ಕೊರೋನಾ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ.

ಇನ್ನೂ ಕಿಲ್ಲರ್ ಕೊರೋನಾಗೆ ಇದುವರೆಗೆ 31 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದರೇ, ಸೋಂಕಿತರಾದಂತ 405 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂಬುದಾಗಿ ಮಾಹಿತಿ ನೀಡಿದರು.

- Advertisement -
spot_img

Latest News

error: Content is protected !!