Tuesday, May 14, 2024
Homeಪ್ರಮುಖ-ಸುದ್ದಿಕರ್ನಾಟಕಕ್ಕೆ ಇಂದು ಕೊರೊನಗ್ರಹಣ : ಒಟ್ಟು 453 ಮಂದಿಗೆ ಕೊರೊನ...

ಕರ್ನಾಟಕಕ್ಕೆ ಇಂದು ಕೊರೊನಗ್ರಹಣ : ಒಟ್ಟು 453 ಮಂದಿಗೆ ಕೊರೊನ ಸೋಂಕು ದೃಢ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 453 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9150 ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 255 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 5618 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3391 ಸಕ್ರಿಯ ಪ್ರಕರಣಗಳು ಎಂದು 77 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 196 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 1272 ಕ್ಕೆ ಏರಿಕೆಯಾಗಿದ್ದು, ಇದುವರೆಗೂ 64 ಮಂದಿ ಮೃತಪಟ್ಟಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಇಂದು 40 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಕಲಬುರ್ಗಿ, ವಿಜಯಪುರ ತಲಾ 39, ಮೈಸೂರು, ಗದಗ ತಲಾ 18, ಧಾರವಾಡ 15, ಬಾಗಲಕೋಟೆ 14, ಬೀದರ್ 13, ದಾವಣಗೆರೆ, ಉತ್ತರ ಕನ್ನಡ, ಕೋಲಾರ ತಲಾ 8 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ದಕ್ಷಿಣಕನ್ನಡ 7, ಮಂಡ್ಯ, ಹಾಸನ ತಲಾ 5, ತುಮಕೂರು 4, ಯಾದಗಿರಿ, ಚಿಕ್ಕಬಳ್ಳಾಪುರ, ಹಾವೇರಿ ತಲಾ 3, ರಾಯಚೂರು, ಶಿವಮೊಗ್ಗ, ರಾಮನಗರ ತಲಾ 2, ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 453 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9150 ಏರಿಕೆಯಾಗಿದೆ.
ಇವತ್ತು ಒಂದೇ ದಿನ 5 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದು ರಾಜ್ಯದಲ್ಲಿ ಇದುವರೆಗೆ 137 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು ಪತ್ತೆಯಾದ ಹೊಸ ಪ್ರಕರಣಗಳ ಪೈಕಿ 69 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು ಐವರು ಅಂತರರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.

- Advertisement -
spot_img

Latest News

error: Content is protected !!