Thursday, May 9, 2024
Homeತಾಜಾ ಸುದ್ದಿSSLC ಪರೀಕ್ಷೆಗೆ ಕೋರ್ಟ್​ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಹೈಕೋರ್ಟ್

SSLC ಪರೀಕ್ಷೆಗೆ ಕೋರ್ಟ್​ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಹೈಕೋರ್ಟ್

spot_img
- Advertisement -
- Advertisement -

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದತಿ ಕೋರಿದ್ದ ರಿಟ್​ ಅರ್ಜಿಯನ್ನು ವಜಾ ಮಾಡಿರುವ ಕರ್ನಾಟಕ ಹೈಕೋರ್ಟ್​, ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರದಂತೆ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಪರೀಕ್ಷೆ ಕುರಿತ ಗೊಂದಲಗಳಿಗೆ ತೆರೆ ಎಳೆದಿದೆ.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸೋಮವಾರ ಅರ್ಜಿಯನ್ನು ರದ್ದುಪಡಿಸಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ 6 ದಿನ ಬದಲು 2 ದಿನ ನಡೆಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಮೂಲಕ ಜುಲೈ 19ರಿಂದ ಪರೀಕ್ಷೆ ನಡೆಯುವುದು ದೃಢಪಟ್ಟಂತಾಗಿದೆ. ಜುಲೈ 19 ರಂದು ಸಮಾಜ ವಿಜ್ಞಾನ, ವಿಜ್ಞಾನ ಹಾಗೂ ಗಣಿತ ಪರೀಕ್ಷೆ ಹಾಗೂ 22 ರಂದು ಭಾಷಾ ಪರೀಕ್ಷೆ ನಡೆಯಲಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!