Tuesday, May 7, 2024
Homeತಾಜಾ ಸುದ್ದಿಆನ್ ಲೈನ್ ತರಗತಿಗಳಿಗೆ ಷರತ್ತುಬದ್ಧ ಅನುಮತಿ ನೀಡಿದ ರಾಜ್ಯ ಸರ್ಕಾರ

ಆನ್ ಲೈನ್ ತರಗತಿಗಳಿಗೆ ಷರತ್ತುಬದ್ಧ ಅನುಮತಿ ನೀಡಿದ ರಾಜ್ಯ ಸರ್ಕಾರ

spot_img
- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಆನ್ ಲೈನ್  ಕ್ಲಾಸ್ ಗಳನ್ನು ನಡೆಸೋದಕ್ಕೆ ರಾಜ್ಯ ಸರ್ಕಾರ ಇದೀಗ ಷರತ್ತು ಬದ್ಧ ಅನುವತಿಯನ್ನು ನೀಡಿದೆ. ಹೈಕೋರ್ಟ್ ನಿರ್ದೇಶನದ ಹಿನ್ನೆಯಲೆಯಲ್ಲಿ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ ಲೈನ್ ತರಗತಿಗಳ ಮೊರೆ ಹೋಗಿದ್ದವು. ಇದಕ್ಕೆ ಪೋಷಕರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.  ಹಾಗಾಗಿ 5ನೇ ತರಗತಿವರೆಗಿನ ಆನ್ ಲೈನ್ ತರಗತಿಗಳನ್ನು ರದ್ದುಗೊಳಿಸಿ ಸರ್ಕಾರ ಆದೇಶ ನೀಡಿತ್ತು. ಇದೀಗ ಹೈಕೋರ್ಟ್ ನಿರ್ದೇಶನ ನೀಡಿದ ಹಿನ್ನೆಲೆ ರಾಜ್ಯ ಸರ್ಕಾರ ಮತ್ತೆ ಆನ್ ಲೈನ್ ತರಗತಿಗಳನ್ನು ನಡೆಸೋದಕ್ಕೆ ಷರತ್ತು ಬದ್ಧ ಅನುಮತಿ ನೀಡಿದೆ.

ಅಲ್ಲದೇ ಸರ್ಕಾರ ರಚಿಸಿರುವ ತಜ್ಞರ ಸಮಿತಿ ವರದಿ ಬರುವವರೆಗೂ ಈ ನಿಯಮಗಳ ಅನುಸಾರವೇ ಆನ್ ಲೈನ್ ತರಗತಿಗಳನ್ನು ಖಾಸಗಿ ಸಂಸ್ಥೆಗಳು ಮಾಡಬೇಕಾಗುತ್ತದೆ.ಯಾವುದೇ ಹೆಚ್ಚುವರಿ ಶುಲ್ಕಗಳನ್ನು  ಪಡೆಯುವಂತಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.

- Advertisement -
spot_img

Latest News

error: Content is protected !!