Monday, May 13, 2024
Homeತಾಜಾ ಸುದ್ದಿಸಿಎಂ BSY ನೇತೃತ್ವದಲ್ಲಿ ಸಭೆ ; ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಸಿಎಂ BSY ನೇತೃತ್ವದಲ್ಲಿ ಸಭೆ ; ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

spot_img
- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಬೇರೆ ಬೇರೆ ದೇಶ ಹಾಗೂ ರಾಜ್ಯದಿಂದ ಕನ್ನಡಿಗರು ವಾಪಸ್ ಆಗುತ್ತಿದ್ದು, ಅವರನ್ನು ಕ್ವಾರಂಟೈನ್ ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿದೆ.

ಸಿಎಂ ಬಿಎಸ್ವೈ ಸಭೆಯಲ್ಲಿ ನಡೆದ ಚರ್ಚೆ/ಆದೇಶಗಳು.!

1) ಹೊರ ರಾಜ್ಯದಿಂದ ಬರುವ ಕನ್ನಡಿಗರು‌ ನಿರ್ದಿಷ್ಟ ವ್ಯವಸ್ಥೆಯಡಿ ಬರುವಂತೆ ಮಾಡಬೇಕು. ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ಕ್ವಾರಂಟೈನ್ ನಲ್ಲಿರಬೇಕು.

2) ಕ್ವಾರಂಟೈನ್ ಸೌಲಭ್ಯಕ್ಕೆ‌ ಅನುಗುಣವಾಗಿ ಕರೆಸಿಕೊಳ್ಳಲಾಗುವುದು. ಬಂದ ತಕ್ಷಣ ಯಾರೂ ಅವರ ಊರಿಗೆ ಹೋಗುವಂತಿಲ್ಲ. ರಾಜ್ಯಕ್ಕೆ ಬಂದ ಎಲ್ಲರೂ 14 ದಿನ‌ ಕ್ವಾರಂಟೈನ್ ಆಗಲೇಬೇಕು. ಕ್ವಾರಂಟೈನ್ ಗೆ ಸಿದ್ದವಿದ್ದವರು ಮಾತ್ರ ನೋಂದಣಿ‌ ಮಾಡಿಕೊಳ್ಳಬೇಕು.

3) ರಾಜ್ಯಕ್ಕೆ ಬರುವವರು‌ ಕಡ್ಡಾಯವಾಗಿ ರಾಜ್ಯದಿಂದ ಅನಿರ್ವಾಯವಾಗಿ ಹೊರ ಹೋಗಿ ಸಿಕ್ಕಿಹಾಕಿ ಕೊಂಡಿರುವವರಾಗಿರಬೇಕು. ಎಲ್ಲಿಗೆ ಹೋಗುತ್ತೇವೆ..ಯಾಕೆ ಹೋಗುತ್ತೇವೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಬೇಕು,

4) ಕೋವಿಡ್ ಪರೀಕ್ಷೆ ಕಡ್ಡಾಯ

ಹೊರ ರಾಜ್ಯದಿಂದ ರೈಲುಗಳಲ್ಲಿ ಬರುವವರಿಗೆ ರಾಜ್ಯ ಸರ್ಕಾರವೇ ವೆಚ್ಚ ಭರಿಸುತ್ತದೆ. ಆದರೆ ಮೊದಲೇ ನೋಂದಣಿ ಮಾಡಿಸಿರಬೇಕು. ಜೊತೆಗೆ ಬೇರೆ ರಾಜ್ಯದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದರೂ, ನಮ್ಮ ರಾಜ್ಯಕ್ಕೆ ಬಂದ ಮೇಲೆ ಖಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಲೇಬೇಕು. ಪರೀಕ್ಷೆ ಮಾಡಿಸಲು ಒಪ್ಪಿದರೆ ಮಾತ್ರ ಅವಕಾಶ ಕೊಡಲಾಗುವುದು. ಪರೀಕ್ಷೆ ಮಾಡಿಸದೇ ಇದ್ದರೆ ರಾಜ್ಯದ ಒಳಗೆ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ.

5) ಇನ್ಮುಂದೆ ಮೃತ ದೇಹಗಳನ್ನು ರಾಜ್ಯಕ್ಕೆ ತರುವಂತಿಲ್ಲ

ಇನ್ನು‌ ಮುಂದೆ ಬೇರೆ ರಾಜ್ಯದಲ್ಲಿ ಮೃತರಾದರೆ ಶವಗಳನ್ನು ರಾಜ್ಯಕ್ಕೆ ತರುವಂತಿಲ್ಲ. ಎಲ್ಲಿ ಮೃತರಾಗಿರುತ್ತಾರೋ ಅಲ್ಲಿಯೇ ಅಂತ್ಯ ಸಂಸ್ಕಾರ ಮಾಡಬೇಕು. ರಾಜ್ಯದಲ್ಲಿ ತೀರಿಕೊಂಡರೆ ತೀರಿಕೊಂಡ ಸ್ಥಳದಲ್ಲಿಯೇ ಅಂತ್ಯಕ್ರಿಯೆ ಮಾಡಬೇಕು. ಮೃತದೇಹವನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸಲು ಅವಕಾಶ ಇರವುದಿಲ್ಲ. ಹೀಗಾಗಿ ಯಾವುದೇ ಕಾರಣದಿಂದಲೂ ಮೃತಪಟ್ಟರೂ ಮೃತಪಟ್ಟ ಸ್ಥಳಗಳಲ್ಲಿಯೆ ಖಡ್ಡಾಯವಾಗಿ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಬೇಕು ಎಂದು ರಾಜ್ಯ ಸರ್ಕಾರ ಕೊರೊನಾ ವೈರಸ್ ಸಂಕಷ್ಟದ ಸಂದರ್ಭದಲ್ಲಿ ಕಟ್ಟುನಿಟ್ಟಿನ ನಿರ್ದೇಶನಗಳನ್ನು ಕೊಟ್ಟಿದೆ.

- Advertisement -
spot_img

Latest News

error: Content is protected !!