Monday, May 20, 2024
Homeತಾಜಾ ಸುದ್ದಿಚುನಾವಣಾ ಆಯೋಗದ ಮಹತ್ವದ ಆದೇಶ : ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆ

ಚುನಾವಣಾ ಆಯೋಗದ ಮಹತ್ವದ ಆದೇಶ : ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆ

spot_img
- Advertisement -
- Advertisement -

ಬೆಂಗಳೂರು : ಮಾರಕ ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿ ತೊಡಗಿಕೊಂಡಿದ್ದಾರೆ. ಹೀಗಾಗಿ ಈ ಹಂತದಲ್ಲಿ ಚುನಾವಣೆ ನಡೆಸದಿರುವುದೇ ಸೂಕ್ತ ಎಂಬ ತೀರ್ಮಾನಕ್ಕೆ ರಾಜ್ಯ ಚುನಾವಣಾ ಆಯೋಗ ಬಂದಿದೆ.
ಮುಂದಿನ ತಿಂಗಳು ನಡೆಯಬೇಕಿದ್ದ ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಕೊರೊನಾವೈರಸ್ ಹಾವಳಿಯಿಂದ ಮುಂದಕ್ಕೆ ಹಾಕಿ ಚುನಾವಣಾ ಆಯೋಗ ಆದೇಶಿಸಿದೆ.
ಈ ಹಿಂದೆ ಚುನಾವಣೆ ನಡೆಸಬೇಕೂ ಬೇಡವೋ ಎಂಬ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆಯೋಗ ವರದಿ ಕೇಳಿತ್ತು. ಬಹುತೇಕ ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಚುನಾವಣೆ ನಡೆಸಲು ಕಷ್ಟ ಎಂಬ ವರದಿಯನ್ನು ನೀಡಿದ್ದರು. ಈ ವರದಿ ಅನ್ವಯ ಆಯೋಗ ಚುನಾವಣೆಗಳನ್ನು ಮುಂದೂಡಿದೆ. ಆದರೆ, ದಿನಾಂಕ ಇನ್ನೂ ತಿಳಿಸಿಲ್ಲ.
ರಾಜ್ಯದ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಬಹುತೇಕ ಈ ತಿಂಗಳೇ ಅಂತ್ಯವಾಗುತ್ತೆ. ಸುಗಮ ಆಡಳಿತಕ್ಕಾಗಿ ಈಗ ಸರ್ಕಾರವೇ ಆಡಳಿತ ಸಮಿತಿಯನ್ನು ಗ್ರಾಮ ಪಂಚಾಯಿತಿಗಳಲ್ಲಿ ರಚಿಸಬೇಕಿದೆ. ಚುನಾವಣೆ ಆಯೋಗದ ನಿರ್ಧಾರಕ್ಕೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ .

- Advertisement -
spot_img

Latest News

error: Content is protected !!