Sunday, May 5, 2024
Homeತಾಜಾ ಸುದ್ದಿಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಹೆಸರು ಬದಲಾವಣೆ: ಈಗಿನ ಹೊಸ ಹೆಸರೇನು ಗೊತ್ತಾ?

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಹೆಸರು ಬದಲಾವಣೆ: ಈಗಿನ ಹೊಸ ಹೆಸರೇನು ಗೊತ್ತಾ?

spot_img
- Advertisement -
- Advertisement -

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಿದ್ದಂತ ಸಚಿವ ಸಂಪುಟ ಸಭೆಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯು ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ಅನುಮೋದನೆ ನೀಡಲಾಗಿತ್ತು. ಈ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದಿಂದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಹೆಸರು ಬದಲಾವಣೆ ಮಾಡಿದೆ.

ಈಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂಬುದಾಗಿ ಮರುನಾಮಕರಣಗೊಳಿಸಿ, ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯಪತ್ರಿಕೆ ಹೊರಡಿಸಲಾಗಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ತಿದ್ದುಪಡಿ ) ಅಧಿನಿಯಮಕ್ಕೆ ತಿದ್ದುಪಡಿಯನ್ನು ತರಲಾಗಿದೆ. ಅದರನುಸಾರ ಇನ್ಮುಂದೆ ಮೂಲ ಅಧಿನಿಯಮದಲ್ಲಿದ್ದಂತ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಂಬ ಪದಗಳ ಬದಲಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಎಂಬ ಪದಗಳನ್ನು ಪ್ರತಿಯೋಜಿಸುವಂತೆ ತಿಳಿಸಲಾಗಿದೆ.

- Advertisement -
spot_img

Latest News

error: Content is protected !!