Saturday, June 6, 2026
Homeತಾಜಾ ಸುದ್ದಿಕಾರ್ತಿಕ ಮಾಸದಲ್ಲಿ ಕರ್ನಾಟಕಕ್ಕೆ ಕಂಟಕ: ಮಳೆ, ಸಿಡಿಲು, ಬೆಂಕಿ ಕಾಟ, ಮತಾಂಧತೆ ಹೆಚ್ಚುತ್ತೆ: ಕೋಡಿ ಶ್ರೀ...

ಕಾರ್ತಿಕ ಮಾಸದಲ್ಲಿ ಕರ್ನಾಟಕಕ್ಕೆ ಕಂಟಕ: ಮಳೆ, ಸಿಡಿಲು, ಬೆಂಕಿ ಕಾಟ, ಮತಾಂಧತೆ ಹೆಚ್ಚುತ್ತೆ: ಕೋಡಿ ಶ್ರೀ ಭವಿಷ್ಯ

- Advertisement -
- Advertisement -

ಧಾರವಾಡ: ಕೋಡಿಮಠದಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಭವಿಷ್ಯ ವಾಣಿ ನುಡಿದಿದ್ದಾರೆ. ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣವಿದೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗುವ ಲಕ್ಷಣವಿದೆ ಎಂದು ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.

ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಕೋಡಿಮಠದ ಸ್ವಾಮೀಜಿ ಸ್ಫೋಟಕ ಭವಿಷ್ಯ ವಾಣಿ ನುಡಿದಿದ್ದರು. ಅದನ್ನು ನೆನಪಿಸಿಕೊಂಡ ಸ್ವಾಮೀಜಿ, ಈ ಸಂವತ್ಸರ ಪ್ರಾರಂಭದಲ್ಲಿಯೇ ನಾನು ಭವಿಷ್ಯ ಹೇಳಿದ್ದೆ. ಮಳೆ, ಸಿಡಿಲು, ಬೆಂಕಿ ಕಾಟ, ಮತಾಂಧತೆ ಹೆಚ್ಚುತ್ತೆ, ಸಾವು-ನೋವು ಆಗುತ್ತೆ ಅಂತಾ ಹೇಳಿದ್ದೆ. ಜನ ಅಶಾಂತಿಯಿಂದ ಇರುತ್ತಾರೆ. ಭೂಮಿ ಕುಸಿಯುತ್ತೆ ಎಂದು ಹೇಳಿದ್ದೆ. ಈಗ ನಾವು ಹೇಳಿದಂತೆಯೇ ಆಗಿದೆ. ಇನ್ನು ಮುಂದೆಯೂ ಮಳೆ ಆಗುವ ಲಕ್ಷಣ ಇದೆ. ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣವಿದೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗೋ ಲಕ್ಷಣವಿದೆ ಎಂದು ಭವಿಷ್ಯ ನುಡಿದಿದ್ದಾರೆ. 

- Advertisement -

Latest News

error: Content is protected !!