Sunday, June 7, 2026
Homeತಾಜಾ ಸುದ್ದಿಸುಲಲಿತ ವ್ಯವಹಾರಗಳ ಶ್ರೇಯಾಂಕದಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ

ಸುಲಲಿತ ವ್ಯವಹಾರಗಳ ಶ್ರೇಯಾಂಕದಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ

- Advertisement -
- Advertisement -

ಬೆಂಗಳೂರು: ಸುಲಲಿತ ವ್ಯವಹಾರಗಳ ಶ್ರೇಯಾಂಕದಲ್ಲಿ ಕರ್ನಾಟಕಕ್ಕೆ ಅಗ್ರ ಸ್ಥಾನ ದೊರೆತಿದೆ. ಕಳೆದ ಸಾಲಿನಲ್ಲಿದ್ದ 17ನೇ ಸ್ಥಾನದಿಂದ ಅಗ್ರಸ್ಥಾನಕ್ಕೆ ಕರ್ನಾಟಕ ರಾಜ್ಯ ಜಿಗಿದಿದೆ.

ಈಸ್‌ ಆಫ್‌ ಡೂಯಿಂಗ್‌ ಬ್ಯುಸಿನೆಸ್‌ ಗೆ ಸಂಬಂಧಿಸಿದಂತೆ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ ಶ್ರೇಯಾಂಕ ಬಿಡುಗಡೆ ಮಾಡಿದ್ದು ಕರ್ನಾಟಕ ಟಾಪ್ ಅಚೀವರ್ ಆಗಿ ಹೊರ ಹೊಮ್ಮಿದೆ. 2020ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಿದ್ದ ಕಳೆದ ಸಾಲಿನ ಶ್ರೇಯಾಂಕ ಪಟ್ಟಿಯಲ್ಲಿ ಕರ್ನಾಟಕ 17ನೇ ಸ್ಥಾನದಲ್ಲಿತ್ತು.

2020ರ ವಹಿವಾಟು ಸುಧಾರಣೆ ಕ್ರಿಯಾ ಯೋಜನೆಯ ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಾರ್ಷಿಕ ಸುಧಾರಣಾ ಕ್ರಮಗಳ ಪರಿಶೀಲನಾ ವರದಿ ನಿನ್ನೆ ಬಿಡುಗಡೆಯಾಗಿದೆ.

ಹಲವು ಸುಧಾರಣಾ ಕ್ರಮಗಳ ಅನುಷ್ಠಾನ ಮತ್ತು ರಾಜ್ಯದ 30ಕ್ಕೂ ಹೆಚ್ಚು ಇಲಾಖೆಗಳ ನಡುವಿನ ಸಮನ್ವಯತೆ ಮತ್ತು ಪೂರಕ ಪ್ರಯತ್ನಗಳಿಂದ ಪ್ರಸಕ್ತ ಸಾಲಿನಲ್ಲಿ‌ ಕರ್ನಾಟಕ ಅಗ್ರ ಸ್ಥಾನಕ್ಕೇರಿದೆ. ಆಂಧ್ರ ಪ್ರದೇಶ, ಗುಜರಾತ್‌, ಹರಿಯಾಣ, ಪಂಜಾಬ್‌, ತಮಿಳುನಾಡು, ತೆಲಂಗಾಣ ರಾಜ್ಯಗಳಿಗೂ ಅಗ್ರ ಸಾಧಕ ರಾಜ್ಯಗಳ ಪಟ್ಟಿಯಲ್ಲಿ ಸ್ಥಾನ ದೊರೆತಿದೆ.

ಕಾರ್ಮಿಕರ ನಿಯಂತ್ರಣ ಕಾಯ್ದೆ, ಪರಿಸರ ಪರವಾನಗಿ, ಪ್ರಕ್ರಿಯೆಗಳ ಸರಳೀಕರಣ, ಬಳಕೆದಾರರ ಸಂಪರ್ಕ, ಪ್ರತಿಕ್ರಿಯೆ, ಕುಂದು ಕೊರತೆಗಳ ನಿವಾರಣೆ ಸೇರಿದಂತೆ ವಿವಿಧ ಅಂಶಗಳ ಸಮೀಕ್ಷೆ ನಡೆಸಿ ಶ್ರೇಯಾಂಕ ನಿರ್ಧಾರ ಮಾಡಲಾಗುತ್ತಿದ್ದು, ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ ಡಿಪಿಐಐಟಿ ಶ್ರೇಯಾಂಕ ನಿರ್ಧರಿಸುತ್ತದೆ.‌

- Advertisement -

Latest News

error: Content is protected !!