Saturday, June 6, 2026
Homeತಾಜಾ ಸುದ್ದಿಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಗೆ ಮೂವರು ಸಾಧಕರ ಆಯ್ಕೆ

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಗೆ ಮೂವರು ಸಾಧಕರ ಆಯ್ಕೆ

- Advertisement -
- Advertisement -

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2022ರ ಸಾಲಿನ ಗೌರವ ಪ್ರಶಸ್ತಿಗೆ ಮೂವರು ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ ಕೆ ಜಗದೀಶ್ ಪೈ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಕಾಡೆಮಿ ಕೊಡಮಾಡುವ 2022ರ ಸಾಲಿನ ಗೌರವ ಪ್ರಶಸ್ತಿಗೆ, ಕೊಂಕಣಿ ಸಾಹಿತ್ಯದಲ್ಲಿ ಮಂಗಳೂರಿನ ಎಚ್ ಎಂ ಪೆರ್ನಾಲ್, ಕೊಂಕಣಿ ಕಲಾ ವಿಭಾಗದಲ್ಲಿ ರಮೇಶ್ ಕಾಮತ್, ಕೊಂಕಣಿ ಜಾನಪದ ವಿಭಾಗದಲ್ಲಿ ಕುಮುದಾ ಗಡಕರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಸೆಪ್ಟೆಂಬರ್ 18 ರಂದು ಬೆಂಗಳೂರಿನ ಮಲ್ಲೇಶ್ವರಂನ ಕಾಶೀಮಠದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. 

- Advertisement -

Latest News

error: Content is protected !!