Saturday, June 6, 2026
Homeಪ್ರಮುಖ-ಸುದ್ದಿಕೊರೊನಾಗೆ ಕರ್ನಾಟಕ ಕಾರ್ಮಿಕ ವೇದಿಕೆಯ ರಾಜ್ಯಾಧ್ಯಕ್ಷ, ಕನ್ನಡಪರ ಹೋರಟಾಗಾರ ನಾಗೇಶ್ ಬಲಿ

ಕೊರೊನಾಗೆ ಕರ್ನಾಟಕ ಕಾರ್ಮಿಕ ವೇದಿಕೆಯ ರಾಜ್ಯಾಧ್ಯಕ್ಷ, ಕನ್ನಡಪರ ಹೋರಟಾಗಾರ ನಾಗೇಶ್ ಬಲಿ

- Advertisement -
- Advertisement -

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಆರ್ಭಟ ಹೇಗಿದೆ ಅನ್ನೋದು ಎಲ್ಲರಿಗೂ ಗೊತ್ತೇ ಇದೆ. ದಿನವೊಂದಕ್ಕೆ 2 ಸಾವಿರಕ್ಕೂ ಅಧಿಕ ಕೇಸುಗಳು ಬೆಂಗಳೂರಿನಲ್ಲೇ ವರದಿಯಾಗುತ್ತಿವೆ. ಅಲ್ಲದೇ ಪ್ರತಿದಿನ 25 ಕ್ಕೂ ಹೆಚ್ಚು ರಾಜಧಾನಿಯೊಂದರಲ್ಲೇ ಆಗುತ್ತಿದೆ. ಹೀಗಿರುವಾಗಲೇ ಬೆಂಗಳೂರಿನಲ್ಲಿ ಕರ್ನಾಟಕ ಕಾರ್ಮಿಕ ವೇದಿಕೆಯ ರಾಜ್ಯಾಧ್ಯಕ್ಷ ಹಾಗೂ ಕನ್ನಡಪರ ಹೋರಾಟಗಾರ ನಾಗೇಶ್ ಕೋವಿಡ್ ಗೆ ಬಲಿಯಾಗಿದ್ದಾರೆ.

ಕನ್ನಡಪರ ಹೋರಾಟಗಾರ ನಾಗೇಶ್ ಅನರು ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನ ಸುಂಕದಕಟ್ಟೆಯ ಲಕ್ಷ್ಮಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದ್ದಾರೆ. ಕಳೆದ ಹತ್ತು ದಿನಗಳಿಂದ ನಾಗೇಶ್ ಉಸಿರಾಟದ ಸಮಸ್ಯೆ ಹಾಗೂ ಜ್ವರದಿಂದ ಬಳಲುತ್ತಿದ್ದರು. ಇದಕ್ಕೆ ಮಾತ್ರೆ ಸೇವಿಸಿ ಅವರ ಆರೋಗ್ಯ ಮತ್ತಷ್ಟು ಕ್ಷೀಣವಾಗಿತ್ತು. ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಸುಂಕದಕಟ್ಟೆಯ ಲಕ್ಷ್ಮೀ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ನಿನ್ನೆ ಮಧ್ಯರಾತ್ರಿ 1 ಗಂಟೆಗೆ ವೈದ್ಯರ ಚಿಕಿತ್ಸೆ ಫಲಕಾರಿಯಾಗದೆ ನಾಗೇಶ್ ಸಾವನ್ನಪ್ಪಿದ್ದಾರೆ‌. ನಾಗೇಶ್ ನಿಧನಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ಸಂತಾಪ ವ್ಯಕ್ತಪಡಿಸಿವೆ.

- Advertisement -

Latest News

error: Content is protected !!