- Advertisement -
- Advertisement -
ಬೆಂಗಳೂರು: ಸೋಮವಾರ ಕರ್ನಾಟಕ ಸರ್ಕಾರ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಅಂತರರಾಜ್ಯದಿಂದ ಕರ್ನಾಟಕಕ್ಕೆ ಬರುವವರಿಗೆ ಇದ್ದ ಹೋಂ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆ ಮಾಡಲಾಗಿದೆ.
ಮಹಾರಾಷ್ಟ್ರ ಸೇರಿದಂತೆ ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸಿದರೆ 14 ದಿನಗಳ ಕಾಲ ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ನಲ್ಲಿರಬೇಕು. ಈ ಹಿಂದೆ ಇದ್ದ 7 ದಿನದ ಹೋಂ ಕ್ವಾರಂಟೈನ್ ನಿಯಮವನ್ನು ಬದಲಾವಣೆ ಮಾಡಲಾಗಿದೆ.
ಜನರು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸಿದರೆ 7 ದಿನದ ಸಾಂಸ್ಥಿಕ ಕ್ವಾರಂಟೈನ್, 7 ದಿನದ ಹೋಂ ಕ್ವಾರಂಟೈನ್‌ನಲ್ಲಿರಬೇಕಿತ್ತು. ಮಹಾರಾಷ್ಟ್ರ ಹೊರತುಪಡಿಸಿ ಬೇರೆ ರಾಜ್ಯದಿಂದ ಬಂದರೆ 7 ದಿನದ ಹೋಂ ಕ್ವಾರಂಟೈನ್ ಕಡ್ಡಾಯವಾಗಿತ್ತು.
ಈಗ ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಬಂದರೂ 14 ದಿನದ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.
- Advertisement -