Wednesday, May 8, 2024
Homeತಾಜಾ ಸುದ್ದಿವಾಯುಭಾರ ಕುಸಿತ: ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ

ವಾಯುಭಾರ ಕುಸಿತ: ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ

spot_img
- Advertisement -
- Advertisement -

ಬೆಂಗಳೂರು: ವಾಯಭಾರ ಕುಸಿತದ ಹಿನ್ನೆಲೆ ಇಂದಿನಿಂದ ( ಜುಲೈ9 ರಿಂದ 12ರವರೆಗೆ) ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್‌ ಪಾಟೀಲ್‌ ತಿಳಿಸಿದ್ದಾರೆ.

ಜುಲೈ 11 ಹಾಗೂ 12ರಂದು ಕೆಲವು ರಾಜ್ಯಗಳಲ್ಲಿ ಅತಿ ಹೆಚ್ಚಿನ ಮಳೆಯಾಗಲಿದೆ. ಮಹಾರಾಷ್ಟ್ರ, ಗೋವಾ, ಆಂಧ್ರ ಕರಾವಳಿ ಪ್ರದೇಶ, ತೆಲಂಗಾಣ, ಕರ್ನಾಟಕ, ಕೇರಳದಲ್ಲಿ ಜುಲೈ 8ರಿಂದ 12ರವರೆಗೆ ಅತಿ ಹೆಚ್ಚಿನ ಮಳೆ ದಾಖಲಾಗುವುದಾಗಿ ಮುನ್ನೆಚ್ಚರಿಕೆ ನೀಡಿದೆ. ಅದರಲ್ಲೂ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವುದೆಂದು ತಿಳಿಸಿದೆ.

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭವಾಗಲಿದೆ. ಕರಾವಳಿ ಜಿಲ್ಲೆಗಳಲ್ಲೂ ವರುಣ ಆರ್ಭಟಿಸಲಿದ್ದಾನೆ. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಜುಲೈ 5ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

- Advertisement -
spot_img

Latest News

error: Content is protected !!