Friday, May 17, 2024
Homeತಾಜಾ ಸುದ್ದಿಕರ್ನಾಟಕ ಯಕ್ಷಗಾನ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿ ಪ್ರಕಟ: 'ಪಾರ್ತಿಸುಬ್ಬ ಪ್ರಶಸ್ತಿ'ಗೆ ಗಣೇಶ ಕೊಲೆಕಾಡಿ ಆಯ್ಕೆ...

ಕರ್ನಾಟಕ ಯಕ್ಷಗಾನ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿ ಪ್ರಕಟ: ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಗಣೇಶ ಕೊಲೆಕಾಡಿ ಆಯ್ಕೆ 

spot_img
- Advertisement -
- Advertisement -

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳು ಪ್ರಕಟವಾಗಿದೆ. ಸುದ್ದಿಗೋಷ್ಟಿ ನಡೆಸಿ ಅಕಾಡೆಮಿ ಅಧ್ಯಕ್ಷ ಜಿ.ಎಲ್. ಹೆಗಡೆ ಅವರು ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿದರು. ಪಾರ್ತಿಸುಬ್ಬ ಪ್ರಶಸ್ತಿಗೆ ಪ್ರಸಂಗಕರ್ತ ಹಾಗೂ ಯಕ್ಷಗಾನ ಗುರು ಗಣೇಶ ಕೊಲೆಕಾಡಿ ಆಯ್ಕೆಯಾಗಿರುವುದಾಗಿ ತಿಳಿಸಿದ್ರು. ಈ ಪ್ರಶಸ್ತಿಯು 1 ಲಕ್ಷ ನಗದನ್ನು ಒಳಗೊಂಡಿದೆ.

ಇನ್ನು 2022ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ತೆಂಕುತಿಟ್ಟಿನ ಯಕ್ಷಗಾನ ಭಾಗವತ ಪುತ್ತಿಗೆ ರಘುರಾಮ ಹೊಳ್ಳ (ಮಂಗಳೂರು), ತೆಂಕುತಿಟ್ಟು ಭಾಗವತ ಪಟ್ಲ ಸತೀಶ್ ಶೆಟ್ಟಿ (ಮಂಗಳೂರು), ಮೂಡಲಪಾಯ ಯಕ್ಷಗಾನ ಭಾಗವತ ಹಾಗೂ ಕಲಾವಿದ ಭಾಗವತ ಚಂದಯ್ಯ (ತುಮಕೂರು), ಭಾಗವತ ಹಾಗೂ ಪಾರಂಪರಿಕ ಯಕ್ಷಗಾನ ಕಲಾವಿದ ಭಾಗವತ ಉಮೇಶ ಭಟ್ ಬಾಡ (ಉತ್ತರ ಕನ್ನಡ) ಮತ್ತು ಭಾಗವತ ಹಾಗೂ ಬಡಗುತಿಟ್ಟು ಯಕ್ಷಗಾನ ಕಲಾವಿದ ಕೆ.ಪಿ. ಹೆಗಡೆ (ಉಡುಪಿ) ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ ತಲಾ 50 ಸಾವಿರ ನಗದು ಒಳಗೊಂಡಿದೆ.

- Advertisement -
spot_img

Latest News

error: Content is protected !!