Friday, May 17, 2024
Homeತಾಜಾ ಸುದ್ದಿಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಆಯ್ಕೆ: ನಲಪಾಡ್ ಗೆ ಬಿಗ್ ಶಾಕ್

ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಆಯ್ಕೆ: ನಲಪಾಡ್ ಗೆ ಬಿಗ್ ಶಾಕ್

spot_img
- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ಕೊನೆಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಹೆಸರನ್ನು ಅಂತಿಮಗೊಳಿಸಿದೆ. ಕಳೆದ ಕೆಲ ತಿಂಗಳಿಂದ ಸಾಕಷ್ಟು ಚರ್ಚೆಗೀಡಾಗಿದ್ದ ಯುವ ಕಾಂಗ್ರೆಸ್ ಅಧ್ಯಕ್ಷರ ಹುದ್ದೆ ಈಗ ರಕ್ಷಾ ರಾಮಯ್ಯರ ಪಾಲಾಗಿದೆ. ಪಕ್ಷದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧಿಕೃತ ಜಾಲತಾಣದಲ್ಲಿ ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷರು ರಕ್ಷಾ ರಾಮಯ್ಯ ಎಂದು ನಮೂದಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ, ಭದ್ರಾವತಿ ಮೂಲದ ಬಿ. ವಿ. ಶ್ರೀನಿವಾಸ್ ಬುಧವಾರ ಮಾತುಕತೆ ನಡೆಸಿ ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಅಂತಿಮಗೊಳಿಸಿದ್ದಾರೆ.

ಚುನಾವಣೆಯಲ್ಲಿ ಅತೀ ಹೆಚ್ಚು ಮತ ಪಡೆದು ಗೆದ್ದಿದ್ದ ಮೊಹಮ್ಮದ್ ನಲಪಾಡ್ ಆಯ್ಕೆ ಅನರ್ಹಗೊಳಿಸಿದ ರಾಷ್ಟ್ರೀಯ ಕಾಂಗ್ರೆಸ್ 2ನೇ ಅತೀ ಹೆಚ್ಚು ಮತ ಪಡೆದ ರಕ್ಷಾ ರಾಮಯ್ಯನ ಅಧ್ಯಕ್ಷರೆಂದು ಘೋಷಿಸಿತ್ತು. ತಾವೇ ಅಧಿಕೃತ ಅಧ್ಯಕ್ಷರಾಗಿ ನಿಯೋಜನೆಯಾಗುತ್ತೇವೆ ಎಂದು ಹೇಳಿಕೊಂಡಿದ್ದ ಮೊಹಮ್ಮದ್ ನಲಪಾಡ್ ಸಾಕಷ್ಟು ಪ್ರಯತ್ನವನ್ನು ನಡೆಸಿದ್ದರು.

ಪಕ್ಷದ ರಾಷ್ಟ್ರೀಯ ಮುಖಂಡರನ್ನು ಭೇಟಿಯಾಗಿ ಪ್ರಭಾವ ಬೀರುವ ಪ್ರಯತ್ನ ಮಾಡಿದ್ದರು. ಆದರೆ, ಕೊನೆಗೂ ಪಕ್ಷ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ರಕ್ಷಾ ರಾಮಯ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದರು.

50-50 ಮಾದರಿ ಸೂತ್ರ
50-50 ಮಾದರಿ ಸೂತ್ರ ರಕ್ಷಾ ರಾಮಯ್ಯ ಮತ್ತು ಮೊಹಮ್ಮದ್ ನಲಪಾಡ್ ನಡುವೆ ಅಧಿಕಾರ ಹಂಚಿಕೆ ಸೂತ್ರದಡಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎಂಬ ಸುದ್ದಿಯೂ ಹಬ್ಬಿದೆ. ಸಿದ್ದರಾಮಯ್ಯ ನಿರ್ದೇಶನದಂತೆ ಡಿಸೆಂಬರ್ ತನಕ ರಕ್ಷಾ ರಾಮಯ್ಯ, ಜನವರಿಯಿಂದ ಮೊಹಮ್ಮದ್ ನಲಪಾಡ್ ಅಧ್ಯಕ್ಷರಾಗಲಿದ್ದಾರೆ ಎಂಬ ಮಾತಿದೆ. 50:50 ಹಂಚಿಕೆ ಸೂತ್ರದ ಬಗ್ಗೆ ಡಿ. ಕೆ. ಶಿವಕುಮಾರ್ ಸಿದ್ದರಾಮಯ್ಯ ಮತ್ತು ಬಿ. ವಿ. ಶ್ರೀನಿವಾಸ್ ಜೊತೆ ಮಾತುಕತೆ ನಡೆಸಿದ್ದರು. ಸರಣಿ ಸಭೆಗಳ ಬಳಿಕ ಅಂತೂ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಿ ನಿಟ್ಟುಸಿರು ಬಿಟ್ಟಿದೆ.

- Advertisement -
spot_img

Latest News

error: Content is protected !!